ಅಂಕೋಲಾ:
ಕಾಂಗ್ರೇಸ್ ಮುಖಂಡ ಗೋಪಾಲ ಕೃಷ್ಣನಾಯಕ ಅವರಮೇಲೆಅಪರಿಚಿತರ ಗ್ಯಾಂಗ್ ಒಂದು ಕಾರಿನಿಂದ ಬಂದು ಹಲ್ಲೆ ಮಾಡಿದೆ. ಅಲ್ಲದೇ ಚಾಕು ಇರಿದಿರುವ ಘಟನೆ ಕಣಕಣೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಗೋಪಾಲ ಕೃಷ್ಣ ನಾಯಕ ಅವರು ತಮ್ಮ ಕಾರನಿಂದ ಇಳಿದು ದೇವಸ್ಥಾನಕ್ಕೆ ಹೋಗು ವೇಳೆ ಅವರನ್ನ ಹಿಂಬಾಲಕಸಿ ಬಂದ ದುಷ್ಕರ್ಮಿಗಳು ಚಾಕು ಇರಿದಿದ್ದಾರೆನ್ನಲಾಗಿದೆ..ತಕ್ಷಣ ಅವರು ಸಮೀಪದಲ್ಲಿದ್ದ ಬ್ಯಾಂಕ್ ಒಂದರೊಳಗೆ ಹೋಗಿ ಬಾಗಿಲು ಹಾಕಿಕೊಂಡು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದುಷ್ಕರ್ಮಿಗಳು ಪರಾರಿಯಾಗಿದ್ದು ಪ್ರಾಥಮಿಕ ಮಾಹಿತಿ ಪ್ರಕಾರ ಗ್ಯಾಂಗ್ ಕಳೆದ ಮೂರು ದಿನಗಳಿಂದ ಅಂಕೋಲಾ ಪಟ್ಟಣದ ಹೊಟೇಲ್ ಒಂದರಲ್ಲಿ ವಾಸ್ತವ್ಯ ಇತ್ತು ಎಂದು ತಿಳಿದು ಬಂದಿದೆ.
ಗಾಯಗೊಂಡ ಗೋಪಾಲಕೃಷ್ಣ ನಾಯಕ ಅವರನ್ನ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದುಷ್ಕರ್ಮಿಗಳ ಪತ್ತೆಗಾಗಿ ಅಂಕೋಲಾ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾಗಳು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
