ಶಿರಸಿ : ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, KSRTC ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ.
ಪರಿಣಾಮವಾಗಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಭಟ್ಕಳದಿಂದ ಬಾಗಲಕೋಟೆ ಕಡೆಗೆ ತೆರಳುತ್ತಿದ್ದ KSRTC ಬಸ್ ಹಾಗೂ ಶಿರಸಿಯಿಂದ ಕುಮಟಾಕ್ಕೆ ಹೊರಟಿದ್ದ ಖಾಸಗಿ ಬಸ್ ನಡುವೆ ಈ ದುರ್ಘಟನೆ ಸಂಭವ೮ಸಿದೆ. ಡಿಕ್ಕಿಯ ತೀವ್ರತೆಗೆ ಎರಡೂ ಬಸ್ಗಳ ಮುಂಭಾಗ ಜಕಂ ಆಗಿದೆ.
ಅಪಘಾತದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ವಾಹನಗಳ ದಟ್ಟಣೆ ಉಂಟಾಗಿ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು. ಸ್ಥಳೀಯರು ಹಾಗೂ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ತಕ್ಷಣ ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
