
ಶಿರಸಿ:
ಜಿಲ್ಲೆಯಲ್ಲಿ ಬೇರ್ಪಡಿಸಿ ಕದಂಬ ಕನ್ನಡ ಜಿಲ್ಲೆ ಮತ್ತು ಬನವಾಸಿ ತಾಲೂಕು ರಚನೆಗಾಗಿ ಬನವಾಸಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆಗಾಗಿ ಒಕ್ಕೊರಳ ಆಗ್ರಹ ಕೇಳಿತು. ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಹೋರಾಟಗಾರ ಅನಂತಮೂರ್ತಿ ಹೆಗಡೆ ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು. ಬಳಿಕ ಸರಕಾರಕ್ಕೆ ಮನವಿ ಸಲ್ಲಿಸಿದರು.