ಉತ್ತರ ಕನ್ನಡ :
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ
ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ,ಉಡುಪಿ,ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಏ. 10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು ,ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ ನೀಡಲಾಗಿದೆ.
ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ದವಾಗಿದ್ದು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದಲ್ಲದೇ ಅಧಿಕ ಗಾಳಿ ಒತ್ತಡದಿಂದಾಗಿ ಕಾರವಾರ ಸೇರಿದಂತೆ ಕರಾವಳಿ ಮೀನುಗಾರರು ಮೀನುಗಾರಿಕೆ ಬಂದ್ ಮಾಡಿದ್ದಾರೆ. ಆಳ ಸಮುದ್ರಕ್ಕೆ ತೆರಳುವ ಪರ್ಶಿಯನ್ ಬೋಟುಗಳು ಬಂದರಿನಲ್ಲಿ ಲಂಗುರು ಹಾಕಿದೆ.
