
ದಾಂಡೇಲಿ:
ನಗರದ ಅಂಬೇವಾಡಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಆಟೋಮೊಟಿವ್ ರಿಪೇರ್ ಪೇಂಟಿಂಗ್ ಕೋರ್ಸ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವೇಂದ್ರ ಜೆ. ಆರ್. ಅವರು ತರಬೇತಿ ಪಡೆದುಕೊಂಡ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆದುಕೊಂಡು ಜೀವನದಲ್ಲಿ ಯಶಸ್ಸನ್ನು ಹೊಂದಬೇಕು. ಶಿಕ್ಷಣದ ಜೊತೆ ಕೌಶಲವು ಅತಿ ಅವಶ್ಯ ಕೌಶಾಲಾಭಿವೃದ್ಧಿಗೆ ಹೆಚ್ಚಿನ ಒತ್ತು ಕೋಡಬೇಕಾಗಿದೆ ಎಂದರು. ಗೌರವ ಅತಿಥಿಗಳಾಗಿ ಆಗಮಿಸಿದ್ದ ಕೆನರಾ ಬ್ಯಾಂಕ್ ಆರಸೆಟಿ ಹಸನಮಾಳದ ಯೋಜನಾಧಿಕಾರಿಗಳಾದ ಮಹಾಬಲೇಶ್ವರ ನಾಯ್ಕ ಅವರು ಮಾತನಾಡಿ ವಿದ್ಯಾರ್ಥಿಗಳು ಬಾಹ್ಯ ಆಕರ್ಷಣೆಗೆ ತುತ್ತಾಗದೇ ಆಯ್ದುಕೊಂಡ ಜೀವನದ ಪಥದಲ್ಲಿ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿ ಸ್ವಾವಲಂಬಿ ಬದುಕನ್ನು ನಡೆಸಬೇಕೆಂದು ತಿಳಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಟಿಯು ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರದ ಉಪ ನಿರ್ದೇಶಕರಾದ ಪ್ರೋ. ವಿಜೇತ ಸ್ವಾದಿಯವರು ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಲಿಮಿಟೆಡ್ ಅವರು ನೀಡಿದ ಉದಾರ ಸಹಾಯ ಹಸ್ತವನ್ನು ಸ್ಮರಿಸಿದರು ಮತ್ತು ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಲಿಮಿಟೆಡ್ ಹೊಂದಿದ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು. ಒಟ್ಟು 30 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ತರಬೇತಿ ಮುಗಿಸಿದ 30 ವಿದ್ಯಾರ್ಥಿಗಳನ್ನು ಬೆಂಗಳೂರಿನ ಎಕ್ಸೋನೋಬಲ್ ಪೇಂಟ್ಸ್ ಲಿಮಿಟೆಡ್ ಗೆ 15 ದಿನದ ಉಚಿತ ಉನ್ನತ ತರಬೇತಿಗಾಗಿ ಕಳಿಸಿಕೊಡಲಾಗುವುದು ಆ ತರಬೇತಿಯ ನಂತರ ಉದ್ಯೋಗವಕಾಶವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಂಸ್ಥೆಯ ಮುಖ್ಯ ತಾಂತ್ರಿಕ ಅಧಿಕಾರಿಗಳಾದ ಶ್ರೀ ಮನೋಹರ್ ಕಾನ್ಕತ್ರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಇ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ತರಬೇತಿದಾರರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು