ದಾಂಡೇಲಿ:
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್–ಅಜಗಾಂವ ಬಳಿ ಸೋಮವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಭಾರಿಯಾಗಿ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಭಾರೀ ಹಾನಿಯಾಗಿದೆ.
ಕಾರುದಲ್ಲಿ ಪ್ರಯಾಣಿಸುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಧಾರವಾಡ ಮೂಲದ ಫಾರೂಖ್ ಸಾಬ್ ಮತ್ತು ಹಳಿಯಾಳ ನಿವಾಸಿ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
