
ಸುವರ್ಣಸೌಧ ಬೆಳಗಾವಿ:
ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು
ಸಂತಾಪ ಸೂಚಿಸಲಾಯಿತು.
ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು.
ಇವರ ನಿಧನದಿಂದಾಗಿ ರಾಜ್ಯ ಹಾಗೂ ರಾಷ್ಟ್ರವು ಒಬ್ಬ ಶ್ರೇಷ್ಠ ಪರಿಸರ ‘ವೃಕ್ಷ ಮಾತೆ’ಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಭಾಪತಿ ಅವರು ಸಂತಾಪ ಸೂಚನೆಯ ನಿರ್ಣಯವನ್ನು ಸದನಕ್ಕೆ ತಿಳಿಸಿದರು.
ಸಭಾ ನಾಯಕ ಎನ್ ಎಸ್ ಬೋಸರಾಜು ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿ, ಮೃತರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುವೆ ಎಂದು ತಿಳಿಸಿದರು.
ಮೃತರ ಗೌರವಾರ್ಥ ಮಾನ್ಯ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿ ಸಂತಾಪ ಸಲ್ಲಿಸಿದರು.