ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕೊಣಪ ಗ್ರಾಮದ ಬೇಬಿ ಶೆಟ್ಟಿ ಅವರ ಹೊಲದಲ್ಲಿ ಸುಮಾರು 15 ಅಡಿ ಉದ್ದದ ಬೃಹತ್ ಹೆಬ್ಬಾವು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತು.
ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಹೊಲದ ಮಾಲೀಕರು ತಕ್ಷಣವೇ ಉರಗ ತಜ್ಞ ರಜಾಕ್ ಶಾ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಆಗಮಿಸಿದ ರಜಾಕ್ ಶಾ ಅವರು ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದರು.
ಸುಮಾರು 15 ಅಡಿ ಉದ್ದದ ಹೆಬ್ಬಾವನ್ನು ಯಾವುದೇ ಅಪಾಯವಾಗದಂತೆ ರಕ್ಷಿಸಿದ ಬಳಿಕ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.
