ಶಿರಸಿ:
ಕಾರೊಂದರಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ನಗರದ ಮುಸ್ಲಿಂಗಲ್ಲಿಯಲ್ಲಿ ಸಾಗಾಟ ಮಾಡುತ್ತಿರುವ ವೇಳೆ ಖಚಿತ ಮಾಹಿತಿ ಮೇರೆಗೆ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ, ಕ್ರೆಟಾ ಕಾರು ಹಾಗೂ ಸುಮಾರು 57 ಕೆ.ಜಿ. ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಕಲಾಮ್ ವುಲ್ಲಾ(78) ಹಾಗೂ ಇನಾಮ್ ವುಲ್ಲಾ(45) ಬಂಧಿತ ವ್ಯಕ್ತಿಗಳು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಅಕ್ಕಿಆಲೂರಿನಲ್ಲಿರುವ ಇತರ ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಈ ಕುರಿತು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಮಾರ್ಗದರ್ಶನದಲ್ಲಿ ಸಿಪಿಐ ಇ.ಸಿ.ಸಂಪತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಗುರುರಾಜ್, ರಾಮದೇವ್, ಅಶೋಕ್, ಮಹಾದೇವ್ ಹಾಗೂ ಶಿವಾನಂದ ಪಾಲ್ಗೊಂಡಿದ್ದರು.
