ಶಿರಸಿ: ನಗರದ ಶಿವಾನಿ ಕಾಲೋನಿಯಲ್ಲಿ ವ್ಯಕ್ತಿಯೊರ್ವ ತಾನು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಿದ್ದಾಪುರ ತಾಲೂಕಿನ ಕಟ್ಟಿಕೈ ಗ್ರಾಮದ ನಿವಾಸಿಯಾಗಿದ್ದ ದಿವಾಕರ ಗೌಡ (37) ಆತ್ಮಹತ್ಯಗೆ ಶರಣಾದ ವ್ಯಕ್ತಿ. ಕೊರಿಯರ್ ಕೆಲಸ ಮಾಡುತ್ತಿದ್ದ ಈತ, ಬಾಡಿಗೆ ಮನೆಯ ಫ್ಯಾನಿನ ಕಬ್ಬಿಣದ ಕೊಂಡಿಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿಎಸ್ಐ ಬಸವರಾಜ ಕನಶೆಟ್ಟಿ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
