
ಕುಮಟಾ : ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋಗಿ ಬೈಕ್ ಹಿಂಬದಿಯಲ್ಲಿ ಕುಳಿತ ಮಹಿಳೆ ರಸ್ತೆಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗುಡೇಅಂಗಡಿಯಲ್ಲಿ ನಡೆದಿದೆ.
ಮೃತ ಮಹಿಳೆ ಸುಮಾ ಮಡಿವಾಳ (32) ಎಂದು ಗುರುತಿಸಲಾಗಿದೆ.
ಪ್ರಶಾಂತ್ ಮಾದಿವಾಳ ಬೈಕ್ ಚಲಿಸುತ್ತಿದ್ದಾಗ ನಾಯಿ ಅಡ್ಡ ಬಂದಿದ್ದು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಇಲ್ಲಿನ ನಾಗಶ್ರೀ ವಾಟರ್ ಸರ್ವೀಸ್ ಸೆಂಟರ್ ಬಳಿ ನಾಯಿ ಅಡ್ಡ ಬಂದಿದ್ದರಿಂದ, ಪ್ರಶಾಂತ್ ಮಾಡಿವಾಳ ಬೈಕ್ ನಿಲ್ಲಿಸಲು ಪ್ರಯತ್ನಿಸಿದರು. ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಸುಮಾ ಮಾಡಿವಾಳ ರಸ್ತೆಯಲ್ಲಿ ಬಿದ್ದು. ತಲೆ ಹಾಗ ಮೂಗಿನಿಂದ ರಕ್ತಸ್ರಾವ ಉಂಟಾಗಿದೆ. ತಕ್ಷಣ ಅಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರು. ಆದರೆ, ಮೂರಕಟ್ಟೆ ಸಮೀಪ ಹೋಗುತ್ತಿದ್ದಂತೆ ಮೃತಪಟ್ಟಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.