
ಕಾರವಾರ:
ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯಿಂದ ಉತ್ತಮ ವೇಸೆ ಸಲ್ಲಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೀಡುವ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯಿತಿಯ ಪಿಡಿಒ ಮಂಜುನಾಥ ಭಾಜನರಾಗಿದ್ದಾರೆ.
ಜಿಲ್ಲಾ ಪಂಚಾಯಿತಿಯ ಕಚೇರಿಯಲ್ಲಿ ಮಂಜುನಾಥ ಅವರಿಗೆ ಪ್ರಶಸ್ತಿಪತ್ರ ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಮಂಜುನಾಥ ಮಾತನಾಡಿ, ತಳ ಮಟ್ಟದಲ್ಲಿ ಸರಕಾರದ ಯೋಜನೆಗಳನ್ನು ಜಾರಿಗೊಳಿಸಿ, ಅರ್ಹರಿಗೆ ತಲುಪಿಸುವ ನನ್ನ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರುತ್ತದೆ ಎಂದರು.
ಜಿಲ್ಲಾ ಪಂಚಾಯತಿಯ ಸಿಇಒ ಈಶ್ವರ ಕುಮಾರ ಕಾಂದೂ, ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಇದ್ದರು.