ದಾಂಡೇಲಿ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆತ್ಮೀಯ ಸ್ನೇಹಿತರು ಹಾಗೂ ಸಂಘ ಪರಿವಾರದ ಪ್ರಮುಖರಾದ ವಾಸುದೇವ ಪ್ರಭು ಅವರು ವಿಧಾನ ಪರಿಷತ್ ಚುನಾವಣೆಯ ಮತದಾನದಂದು ದಾಂಡೇಲಿಯಲ್ಲಿ ಮತದಾನ ಕೇಂದ್ರದ ಆವರಣದ ಹೊರಗಡೆ ಕಾಂಗ್ರೆಸ್ ಪಕ್ಷದವರ ಕೌಂಟರಿನಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ಕಾಣಿಸಿಕೊಂಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.
ವಾಸುದೇವ ಪ್ರಭು ಅವರು ಆರೆಸ್ಸೆಸ್ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದು, ಹಿಂದೂ ಸಮಾಜೋತ್ಸವ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದಿಗ ಕಾಂಗ್ರೆಸ್ ಮುಖಂಡರ ಜೊತೆ ಕಾಣಿಸಿಕೊಂಡಿರುವುದು ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
