
ಶಿರಶಿ:
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ತಾಲೂಕಿನ ಬನವಾಸಿ ರಸ್ತೆಯ ನವಣಗೆರೆ ಕ್ರಾಸಿನಲ್ಲಿ ನಡೆದಿದೆ.
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ಮುರಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಚಾಲಕನನೆರವಿಗೆ ಮುಂದಾಗಿದ್ದಾರೆ.