ದಾಂಡೇಲಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ದಾಂಡೇಲಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಅನುದಿನ ಅನುಸ್ಪಂದನ 2026-27ರ ಉದ್ಘಾಟನಾ ಸಮಾರಂಭದ ಅಂಗವಾಗಿ ನವೆಂಬರ್ 1ರಂದು ಸಂಜೆ 5 ಗಂಟೆಗೆ ದಾಂಡೇಲಿಯ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ “ವಿಭಜಿತ ಕನ್ನಡ ನಾಡಿನಿಂದ – ಅಖಂಡ ಕರ್ನಾಟಕದವರೆಗೆ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್. ವಾಸರೆ ವಹಿಸಲಿದ್ದು, ಲೇಖಕಿ ನಾಗರೇಖಾ ಗಾಂವಕರ ಉಪನ್ಯಾಸ ನೀಡಲಿದ್ದಾರೆ. ಯುವ ಕವಿ ಮಂಜುನಾಥ ನಾಯ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುರ್ತುಜಾ ಆನೆಹುಸೂರ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಕಾರ್ಯಕ್ರಮದ ರೂಪುರೇಷೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾರಾಯಣ ಎಲ್. ನಾಯ್ಕ ಅವರು ನಿರ್ವಹಿಸಲಿದ್ದು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು ಮನವಿ ಮಾಡಿದ್ದಾರೆ
