
ಕಾರವಾರ:
ಗೋವಾ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಅವರನ್ನ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಕಾರವಾರ ಗೋವಾ ಗಡಿಯಲ್ಲಿ ಸ್ವಾಗತಿಸಿದರು.
ಕಾರವಾರಕ್ಕೆ ಆಗಮಿಸಿದ ಗೃಹ ಸಚಿವರು ಇಂದು ಬೆಳಿಗ್ಗೆ 11ಗಂಟೆ ಸುಮಾರಿಗೆ ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ಹಾಗೂ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ಇನ್ನು ಕಾರವಾರಕ್ಕೆ ತೆರಳಲಿರುವ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮದಲ್ಲಿ ಗೃಹ ಸಚಿವರು ಪಾಲ್ಗೊಳ್ಳಲಿದ್ದಾರೆ. ಶಿರಸಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಟ್ರಾಫಿಕ್ ಪೊಲೀಸ್ ಠಾಣೆಗೆ ಕಾರವಾರದಿಂದಲ್ಲೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 1.15ಕೋಟಿ ವೆಚ್ಚದಲ್ಲಿ ನವೀಕರಿಸಲಾದ ವಿವಿಧ ವಿಭಾಗಗಳ ಉದ್ಘಾಟನೆ ಸಹ ಸಚಿವರು ನೆರವೇರಿಸಲಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 3-30ರಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.