ದಾಂಡೇಲಿ:
ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನೆಯ ವಿಶೇಷ ಶಿಬಿರದ ಅಂಗವಾಗಿ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಹಳಿಯಾಳ, ಐಎಂಎ ರಕ್ತ ಕೇಂದ್ರ ,ಪಂಡಿತ ಸಾರ್ವಜನಿಕ ಆಸ್ಪತ್ರೆ ಶಿರಸಿ, ಸಾರ್ವಜನಿಕ ಆಸ್ಪತ್ರೆ ದಾಂಡೇಲಿ, ವಿ.ಆರ್.ಡಿ.ಎಂ. ಟ್ರಸ್ಟ್ ಹಳಿಯಾಳ, ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೇಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ೨೮-೩-೨೦೨೫ ಮುಂಜಾನೆ ೧೦-೦೦ ಗಂಟೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ದಾಂಡೇಲಿ ಹಾಗು ಸುತ್ತಮುತ್ತಲಿನ ಹಳ್ಳಿಗಳ ಸಾರ್ವಜನಿಕರು ರಕ್ತದಾನ ಮಾಡಬೇಕೆಂದು ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಡಿ.ಒಕ್ಕುಂದ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.