ದಾಂಡೇಲಿ: ಕನ್ನಡ ಸಾಹಿತ್ಯ ಪರಿಷತ್ತು ದಾಂಡೇಲಿ ತಾಲೂಕು ಘಟಕದ ಆಶ್ರಯದಲ್ಲಿ ನವೆಂಬರ್ 6ರಂದು ಸಂಜೆ 5:30 ಗಂಟೆಗೆ ಸಾಹಿತ್ಯ ಭವನದಲ್ಲಿ ಜನಪದ ಸಿರಿ, ಗಾಯನ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಸಾಪ ತಾಲೂಕು ಅಧ್ಯಕ್ಷ ನಾರಾಯಣ ಎಲ್. ನಾಯ್ಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಎಚ್.ಎಸ್. ಕುಲಕರ್ಣಿ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಸಂಘಟನೆಯ ರಾಜ್ಯಾಧ್ಯಕ್ಷೆ ರೇಣುಕಾ ಬಂದಂ, ಸಾಹಿತ್ಯಾಸಕ್ತರಾದ ಕವಿತಾ ಕಾಮತ್ ಭಾಗವಹಿಸಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿ ಪ್ರವೀಣ್ ನಾಯಗಕ ಪ್ರಾಸ್ತಾವಿಕ ಮಾತನಾಡಲಿದ್ದು, ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಸಾಪ ಗೌರವ ಕಾರ್ಯದರ್ಶಿ ಗುರುಶಾಂತ ಜಡೆ ಹಿರೇಮಠ, ಗೌರವ ಕೋಶಾಧ್ಯಕ್ಷ ಶ್ರೀಮಂತ ಮನವಿ ಮಾಡಿದ್ದಾರೆ.
