
ಶಿರಸಿ:
ನಮ್ಮ ರಾಜ್ಯದಲ್ಲಿ ಈ ಮೊದಲು ಪ್ರತಿದಿನ ಸುಮಾರು 80 ಸಾವಿರ ಜನರು ಬಸ್ ಸಂಚಾರ ಮಾಡುತ್ತಿದ್ದರು.ಆದರೆ ಶಕ್ತಿ ಯೋಜನೆ ಬಂದ ಮೇಲೆ ಪ್ರತಿದಿನ ಒಂದು ಕೋಟಿಗೂ ಹೆಚ್ಚಿನ ಜನರು ಅದರಲ್ಲೂ ಮುಖ್ಯವಾಗಿ ಮಹಿಳೆಯರೇ ಹೆಚ್ಚು ಓಡಾಡುವಂತಾಗಿದೆ ಎಂದು ಶಿರಸಿಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರು ಹೇಳಿದರು.
ಕಾಂಗ್ರೆಸ್ ಸರಕಾರ ಬಂದ ಬಳಿಕ ಘೋಷಣೆ ಮಾಡಿದ ಐದಯ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ. ಅದರಲ್ಲಿ ಶಕ್ತಿ ಯೋಜನೆಯು ಗ್ರಾಮೀಣ ವಮಭಾಗದ ಮಹಿಳೆಯರಿಗ೩ ಸಾಕಷ್ಟು ಉಪಯುಕ್ತವಾಗಿದೆ. ಈ ಮೂಲಕ ನುಡಿದಂತೆ ನಡೆದಿದ್ದೇವೆ. ಜನರ ಬೆಂಬಲಕ್ಕೆ ಸರಕಾರ ನಿಂತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರುಗಳಾದ ಭೀಮಣ್ಣ ಟಿ ನಾಯ್ಕ, ಶಿವರಾಮ್ ಹೆಬ್ಬಾರ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ಹಾಗೂ ಇತರರಿದ್ದರು.