
ಕಾರವಾರ:
ಜಿಲ್ಲೆಯಾದ್ಯಂತ ರಂಜಾನ್ ಹಾಗೂ ಯುಗಾದಿ ಹಬ್ಬದ ನಿಮಿತ್ತ ಬೈಕ್ ರ್ಯಾಲಿ ಹಾಗೂ ಶೋಭಾಯಾತ್ರೆ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾ.30 ರಿಂದ ಏ.2 ರವರೆಗೆ ನಡೆಯುವ ಹಿನ್ನಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮಾ. 30 ರಂದು ಬೆಳಗ್ಗೆ 6 ಗಂಟೆಯಿoದ ಮಾ. 31 ಬೆಳಗ್ಗೆ 6 ಗಂಟೆಯವರೆಗೆ ಶಿರಸಿ, ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ , ಮಾ.30 ರಂದು ಬೆಳಗ್ಗೆ 6 ಗಂಟೆಯಿoದ ಏಪ್ರಿಲ್ 1 ಬೆಳಗ್ಗೆ 6 ಗಂಟೆಯವರೆಗೆ ಯಲ್ಲಾಪುರ ತಾಲೂಕಿನಲ್ಲಿ ಹಾಗೂ ಮಾ.31 ರಂದು ಬೆಳಗ್ಗೆ 6 ಗಂಟೆಯಿoದ ಏಪ್ರಿಲ್ 1 ಬೆಳಗ್ಗೆ 6 ಗಂಟೆಯವರೆಗೆ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಹಾಗೂ ಏಪ್ರಿಲ್ 1 ರಂದು ಬೆಳಗ್ಗೆ 6 ರಿಂದ ಏಪ್ರಿಲ್ 2 ರಾತ್ರಿ 12 ಗಂಟೆಯವರೆಗೆ ಹೊನ್ನಾವರ ಕಾಸರಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.