ಶಿರಸಿ: ಬಸ್ ನಿಲ್ದಾಣಕ್ಕೆ ಬಸ್ ಬರುವುದನ್ನೇ ಕಾಯುವ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ನಿರಾಸೆ. ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಮುಂದೆ ಅಥವಾ ಹಿಂದಕ್ಕೆ ನಿಲ್ಲಿಸಿ ತೆರಳುತ್ತಿರುವ ಕೆಎಸ್ಆರ್ಟಿಸಿ ಬಸ್ಗಳ ವರ್ತನೆಯಿಂದ ಬೇಸತ್ತ ಸಾರ್ವಜನಿಕರು ದಾಸನಕೊಪ್ಪದಲ್ಲಿ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ದಾಸನಕೊಪ್ಪ ಬಸ್ ನಿಲ್ದಾಣದಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ಗಾಗಿ ಕಾಯುತ್ತಾರೆ. ಆದರೆ ಕೆಲವು ಕೆಎಸ್ಆರ್ಟಿಸಿ ಬಸ್ಗಳ ಚಾಲಕರು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ, ನಿಲ್ದಾಣದ ಮುಂದೆ ಅಥವಾ ಹಿಂದೆ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಬಸ್ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಬಸ್ ಹತ್ತಲು ಪರದಾಡುವಂತಾಗಿದ್ದು, ಶಾಲಾ-ಕಾಲೇಜುಗಳಿಗೆ ಹಾಗೂ ಕೆಲಸಕ್ಕೆ ಸಮಯಕ್ಕೆ ಸರಿಯಾಗಿ ತಲುಪಲು ತೊಂದರೆಯಾಗುತ್ತಿದೆ. ನಿಲ್ದಾಣದಲ್ಲಿ ಕಾಯುತ್ತಿದ್ದರೂ ಬಸ್ ನಿಲ್ಲಿಸದೆ ತೆರಳುತ್ತಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನಗೊಂಡಿದ್ದಾರೆ.
ಈ ಸಮಸ್ಯೆಯಿಂದ ಬೇಸತ್ತ ಸಾರ್ವಜನಿಕರು ಇಂದು ದಾಸನಕೊಪ್ಪದಲ್ಲಿ ಬಸ್ ತಡೆದು ತಮ್ಮ ಆಕ್ರೋಶ ಹೊರಹಾಕಿದರು. ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳು ಕಡ್ಡಾಯವಾಗಿ ಬಸ್ ನಿಲ್ದಾಣದೊಳಗೆ ಬಂದು ನಿಲ್ಲಿಸಬೇಕು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಂಬಂಧಪಟ್ಟ ಕೆಎಸ್ಆರ್ಟಿಸಿ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಚಾಲಕರಿಗೆ ಸೂಕ್ತ ಸೂಚನೆ ನೀಡಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
