
ದಾಂಡೇಲಿ: ಹನುಮಾನ ಜಯಂತಿಯ ಅಂಗವಾಗಿ ಜೋಯಿಡಾ ತಾಲೂಕಿನ ಅನಮೋಡ ಗ್ರಾಮದಲ್ಲಿರುವ ಮಾರುತಿ ಮಂದಿರದಲ್ಲಿ ಬೆಳಿಗ್ಗೆ ಶ್ರೀ ಸತ್ಯನಾರಾಯಣ ಮಹಾಪೂಜೆಯ ನಂತರ ಪಾಲಕಿ ಉತ್ಸವ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಸಾಯಂಕಾಲ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು. ಅನಮೋಡ ತನಿಖಾ ಠಾಣೆಯ ಅಬಕಾರಿ ಉಪ-ನಿರೀಕ್ಷಕರಾದ ಟಿ.ಬಿ. ಮಲ್ಲಣ್ಣವರನ್ನು, ಸನ್ಮಾನಿಸಲಾಯಿತು.ಟಿ.ಬಿ.ಮಲ್ಲಣ್ಣವರ ಹಲವಾರು ವರ್ಷಗಳಿಂದ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ಶಾಲು ಹೊದಿಸಿ, ಹಾರ ಹಾಕಿ, ಗೌರವ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ.ಬಿ. ಮಲ್ಲಣ್ಣವರ್ ಗ್ರಾಮಸ್ಥರು ಇಂದಿನ ಉತ್ಸವವನ್ನು ತುಂಬಾ ಶ್ರದ್ಧೆ ಮತ್ತು ಭಕ್ತಿಯಿಂದ ಎಲ್ಲರೂ ಒಗ್ಗಟ್ಟಾಗಿ ನಡೆಸಿರುವುದು ನೋಡಿ ತುಂಬಾ ಸಂತೋಷವಾಗುತ್ತಿದೆ, ಹನುಮಾನ ಮಂದಿರದ ವೇದಿಕೆಯಲ್ಲಿ ಸನ್ಮಾನಿಸಿರುವುದು ಜೀವನದಲ್ಲಿ ಮರೆಯಲಾಗದ ಒಂದು ಸಂತೋಷದ ಕ್ಷಣವಾಗಿದೆ, ನನ್ನ ಅಳಿಲು ಸೇವೆಯನ್ನು ಪರಿಗಣಿಸಿ ಸನ್ಮಾನಿಸಿರುವುದು ನನ್ನ ಸೌಭಾಗ್ಯವೆಂದರು. ಇಂದಿನ ಕಾರ್ಯಕ್ರಮಗಳು ಯಶಸ್ವಿಯಾಗಲು ಮೇಲಾಧಿಕಾರಿಯಾದ ಅಬಕಾರಿ ನಿರೀಕ್ಷಕರ ಸಲಹೆ ಮತ್ತು ಮಾರ್ಗದರ್ಶನ ಮತ್ತು ಸಿಬ್ಬಂದಿಗಳ ಸಹಕಾರದಿಂದ ಸಾಧ್ಯವಾಗಿದೆ ಎಂದು ನುಡಿದರು .ಈ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿ ಮಂಡಳಿಯವರು ಮತ್ತು ಅನಮೋಡ ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.