ಅಂಕೋಲಾ:
ಅಂಕೋಲಾ-ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ರ ಸುಂಕಸಾಳ ಕೋಟೆಪಾಲ ಬಳಿ ಸೋಮವಾರ ಲಾರಿ ಮತ್ತು ಟ್ಯಾಂಕರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಾಯಗೊಂಡಿದ್ದಾರೆ.
ಅಂಕೋಲಾದಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA47 A1281 ನಂಬರಿನ ಲಾರಿ ಮತ್ತು ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ OD14 AE6440 ನಂಬರಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳ 3 ಜನ ಪ್ರಯಾಣಿಕರು ಗಾಯಗೊಂಡಿದ್ದು, ಆಂಬುಲೆನ್ಸ್ ಸಹಾಯದಿಂದ ಅವರನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳ್ಳುವಂತಾಯಿತು. ಬಳಿಕ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ, ಹೆದ್ದಾರಿ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ. ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಂಕೋಲಾ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.