ದಾಂಡೇಲಿ:
ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತೀವ್ರವಾಗಿ ಖಂಡಿಸಿದೆ ಎಂದು ಡಿ.ವೈ.ಎಫ.ಐ ರಾಜ್ಯ ಸಮಿತಿ ಸದಸ್ಯ ಡಿ.ಸ್ಯಾಮಸನ ಹೇಳಿದರು.
ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿ ನಡೆಸಿದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು