
ಕಾರವಾರ:
ಹಳಿಯಾಳದ ಪುರಭವನದಲ್ಲಿ ಮೇ ೧೦ರಂದು ಭೀಮ್ ಆರ್ಮಿಯ ಜಿಲ್ಲಾ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಭೀಮ್ ಆರ್ಮಿಯ ಜಿಲ್ಲಾ ಉಸ್ತುವಾರಿ ಮೇಘರಾಜ ಆರ್ ಮೇತ್ರಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಸಾಹಿತಿ ಮಾಸ್ಕೇರಿ ಎಂ.ಕೆ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಭೀಮ್ ಆರ್ಮಿಯ ರಾಜ್ಯಾಧ್ಯಕ್ಷ ರಾಜಗೋಪಾಲ ಡಿ.ಎಸ್ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಮೇಘರಾಜ ಆರ್. ಮೇತ್ರಿ ವಹಿಸಿಕೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಬಗ್ಗೆ ಉಪನ್ಯಾಸ, ಎಸ್ಸೆಸೆಲ್ಸಿಯಲ್ಲಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಂಬೇಡ್ಕರ್ ಅವರ ಚಿತ್ರ ಬಿಡಿಸುವ ಸ್ಪರ್ಧೆ, ಅಂಬೇಡ್ಕರ್ ಅವರ ಜೀವನದ ಬಗ್ಗೆ ಹಾಗೂ ಸಂವಿಧಾನದ ಮಹತ್ವದ ಕುರಿತು ಪ್ರಭಂಧ ಸ್ಪರ್ಧೆ, ನೃತ್ಯ, ಸಂಗೀತ ಕಾರ್ಯಕ್ರಮಗಳು ನಡೆಸುವುದಾಗಿ ತಿಳಿಸಿದ್ದಾರೆ.