ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, 230ಕ್ಕೂ ಅಧಿಕ ಜನ ಅತಂತ್ರರಾಗಿದ್ದಾರೆ. ಅಪಾಯದಲ್ಲಿದ್ದವರನ್ನು ರಕ್ಷಿಸಿದ ಜಿಲ್ಲಾಡಳಿತ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಿದೆ. ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮದ ಜನ ತೊಂದರೆಗೆ ಸಿಲುಕಿದ್ದಾರೆ. ಈವರೆಗೆ ಹೊನ್ನಾವರದಲ್ಲಿ4, ಕುಮಟಾದಲ್ಲಿ 2 ಹಗೂ ಅಂಕೋಲಾದಲ್ಲಿ ಒಂದು ಕಾಳಜಿ ಕೇಂದ್ರ ತೆರೆಯಲಾಗಿದೆ. ಇನ್ನಷ್ಟು ಕಾಳಜಿ ಕೇಂದ್ರ ತೆರೆಯುವ ತಯಾರಿ ನಡೆಯುತ್ತಿದೆ.

ಶುಕ್ರವಾರ ಕಾಳಜಿ ಕೇಂದ್ರಕ್ಕೆ ಆಗಮಿಸಿದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಮಧ್ಯಾಹ್ನ ಊಟ ನೀಡಿ, ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ. ಇದರೊಂದಿಗೆ ತುರ್ತು ಸಹಾಯವಾಣಿ ತೆರೆಯಲಾಗಿದ್ದು, ಮಳೆಯಿಂದ ತೊಂದರೆಗೆ ಸಿಲುಕಿದವರು 9483511015ಗೆ ಕರೆ ಮಾಡಿ ಸಮಸ್ಯೆ ಹೇಳಬಹುದು.