ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ನಾಲ್ಕು ತಾಲೂಕಿನ ಶಾಲೆಗಳಿಗೆ ಶನಿವಾರವೂ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆ ಶುಕ್ರವಾರ ಮೂರು ತಾಲೂಕಿಗೆ ಸಂಬoಧಿಸಿ ರಜೆ ಘೋಷಿಸಲಾಗಿತ್ತು. ಇದೀಗ ಕಾರವಾರ, ಭಟ್ಕಳ, ಹೊನ್ನಾವರ ಹಾಗೂ ಕುಮಟಾ ತಾಲೂಕಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಸರ್ಕಾರಿ ಶಾಲೆಗಳ ಜೊತೆ ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೂ ಈ ರಜೆ ಅನ್ವಯವಾಗಲಿದೆ. ಪದವಿ ಪೂರ್ವ ಕಾಲೇಜಿಗೆ ಸಹ ರಜೆ ನೀಡಲಾಗಿದೆ.