ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗೆ ಜುಲೈ ತಿಂಗಳಿನ ಮೂರನೇ ವಾರದಲ್ಲಿ 30 ದಿನಗಳ ಕಾಲ ಪುರುಷರ ಹೊಲಿಗೆ ತರಬೇತಿ ನಡೆಯಲಿದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಜು 20 ಕೊನೆಯ ದಿನ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತ. ಮೊದಲು ಬಂದ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿoದ ಸಾಲ ಪಡೆದು ಸ್ವ ಉದ್ಯೋಗ ಪ್ರಾಂಭಿಸುವ ವಿಧಾನದ ಬಗ್ಗೆ ಕಲಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9980510717 ಹಾಗೂ 9483485489ನ್ನು ಸಂಪರ್ಕಿಸಿ.