• Latest
ಮರೆತ ಮಾತು ಮತ್ತೆ ನೆನಪಿಗೆ: ಸ್ವಭಾಷಾ ಚಾತುರ್ಮಾಸಕ್ಕೆ ಸ್ವಾಮೀಜಿ ನಿರ್ಧಾರ

ಮರೆತ ಮಾತು ಮತ್ತೆ ನೆನಪಿಗೆ: ಸ್ವಭಾಷಾ ಚಾತುರ್ಮಾಸಕ್ಕೆ ಸ್ವಾಮೀಜಿ ನಿರ್ಧಾರ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮರೆತ ಮಾತು ಮತ್ತೆ ನೆನಪಿಗೆ: ಸ್ವಭಾಷಾ ಚಾತುರ್ಮಾಸಕ್ಕೆ ಸ್ವಾಮೀಜಿ ನಿರ್ಧಾರ

uknews9.comby uknews9.com
in ಲೇಖನ
ADVERTISEMENT

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ವಿಶ್ವಾವಸು ಸಂವತ್ಸರದ ಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಪರಮಪೂಜ್ಯರು ಆಶೀರ್ವಚನ ನೀಡಿದರು. ನಾವು ನಮ್ಮ ಭಾಷೆಯನ್ನು ಮಾತನಾಡುವುದು ದೇಶ, ಸಂಸ್ಕೃತಿ, ಭಾಷೆ, ಪರಂಪರೆಗೆ ನಾವು ಸಲ್ಲಿಸುವ ಅತಿದೊಡ್ಡ ಸೇವೆ. ಇದು ಜೀವನಕ್ಕೆ ಸ್ವಾರಸ್ಯವನ್ನೂ ತರುತ್ತದೆ ಎಂದರು.

ADVERTISEMENT

ಶುದ್ಧವಾದ ಮಾತೃಭಾಷೆಯನ್ನು ಮಾತನಾಡುವ ಪ್ರಯತ್ನ ಸ್ವಭಾಷಾ ಚಾತುರ್ಮಾಸ್ಯದ ತಿರುಳು. ಮರೆತ ಪದಗಳನ್ನು ನೆನಪಿಸಿಕೊಳ್ಳೋಣ. ಪರಕೀಯತೆ ನಮ್ಮ ನಾಲಿಗೆಯಲ್ಲೇ ಇದೆ. ನಮ್ಮ ನಾಲಿಗೆ ಕೆಡಿಸಿಕೊಳ್ಳದಿರೋಣ. ಸಂಸ್ಕಾರದಿAದ ಶಬ್ದ. ಶಬ್ದದಿಂದ ವಾಕ್ಯ; ಅದು ಭಾಷೆಯ ಮೂಲ. ಆದ್ದರಿಂದ ಪ್ರತಿ ಪದವೂ ತನ್ನೊಂದಿಗೆ ಆ ಭಾಷೆಯ ಸಂಸ್ಕಾರವನ್ನು ತರುತ್ತದೆ. ಈ ಬಗ್ಗೆ ಎಚ್ಚರ ಅಗತ್ಯ ಎಂದು ಪ್ರತಿಪಾದಿಸಿದರು.
ಇದೇ ಮೊಟ್ಟಮೊದಲ ಬಾರಿಗೆ ಇಂಥ ಸೂತ್ರ ಇಟ್ಟುಕೊಂಡು ಚಾತುರ್ಮಾಸ್ಯ ಆಚರಿಸಲಾಗುತ್ತಿದೆ. ಚಾತುರ್ಮಾಸ್ಯ ಧರ್ಮಕ್ಕೆ ಸೀಮಿತ ಎಂದು ವಾದಿಸುವವರಿದ್ದಾರೆ. ಭಾಷೆಯನ್ನು ಉಳಿಸುವುದು ಕೂಡಾ ಧರ್ಮದ ಒಂದು ಅಂಗ. ಉರಿಯುವುದು ಬೆಂಕಿಯ ಧರ್ಮ; ಹರಿಯುವುದು ನೀರಿನ ಧರ್ಮ; ಅಂತೆಯೇ ನಮ್ಮ ಭಾಷೆ ಮಾತನಾಡುವುದು ನಮ್ಮ ಧರ್ಮ ಎಂದು ವಿಶ್ಲೇಷಿಸಿದರು.

“ಮನೆಮಾತು ಮರೆತು ಹೋಗಿದೆ. ಉಪಭಾಷೆಗಳು ಬಹುತೇಕ ನಶಿಸಿವೆ. ಕನ್ನಡ ಮಾತನಾಡುವ ಸಂದರ್ಭದಲ್ಲೂ ಕನ್ನಡವನ್ನು ಕಡೆಗಣಿಸುತ್ತೇವೆ. ನಮ್ಮ ಭಾಷೆಯಲ್ಲಿ ಬೇರೆ ಭಾಷೆ ತೂರಿಕೊಂಡಿದೆ. ಈ ಬಾರಿಯ ಚಾತುರ್ಮಾಸ್ಯ ಭಾಷೆ ಶುದ್ಧಗೊಳಿಸುವ ಪ್ರಯತ್ನಕ್ಕೆ ಶ್ರೀಕಾರ ಹಾಕಲಿದೆ ಎಂದು ಬಣ್ಣಿಸಿದರು.

ಹಲವು ವರ್ಷಗಳ ಹಿಂದೆ ಬಿಎಂಶ್ರೀಯವರ ಕಾಲದಲ್ಲಿ ಒಂದು ಇಂಗ್ಲಿಷ್ ಪದ ಬಳಸಿದರೆ ಒಂದು ರೂಪಾಯಿ ತಪ್ಪುಕಾಣಿಕೆ ತೆಗೆದಿಡಬೇಕು ಎಂಬ ಕಾಸಿನ ಸಂಘ ಹಿಂದೆ ಅಸ್ತಿತ್ವದಲ್ಲಿತ್ತು. ಕನ್ನಡದ ಸಾರ ಉಳಿಸಿಕೊಳ್ಳುವುದು ಇದರ ಉದ್ದೇಶವಾಗಿತ್ತು. ಕನ್ನಡವನ್ನು ಶುದ್ಧವಾಗಿ ಮಾತನಾಡಲು ಕಲಿಯೋಣ. ಭಾಷೆಯಲ್ಲಿ ಒಂದು ಪದ ಮರೆಯಾದರೆ ಅದಕ್ಕೆ ಸಂಬAಧಿಸಿದ ಸಂಸ್ಕೃತಿ- ಸಂಸ್ಕಾರ ಎಲ್ಲವೂ ನಾಶವಾಗುತ್ತದೆ. ಒಂದು ಪರಕೀಯ ಪದ ಆಯಾ ಭಾಷೆಯ ಸಂಸ್ಕಾರವನ್ನು ತರುತ್ತದೆ. ನಮಗೆ ಗೊತ್ತಾಗದಂತೆ ನಾವೇ ಪರಕೀಯರಾಗುತ್ತಿದ್ದೇವೆ. ಉದಾಹರಣೆಗೆ ಇಂಗ್ಲಿಷ್ ನಾವು ಆವಾಹಿಸಿಕೊಂಡಿರುವ ಆಕ್ರಮಣ. ನಮ್ಮತನವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಭಾಷೆ ಉಳಿಸಿಕೊಳ್ಳುವುದು ಅನಿವಾರ್ಯ ಎಂದು ಪ್ರತಿಪಾದಿಸಿದರು.

ಗುಲಾಮಗಿರಿ, ದಾಸ್ಯದ ಸಂಕೇತ ಏಕೆ ಎಂದು ಈಗ ಪ್ರಶ್ನಿಸದಿದ್ದರೆ ಮುಂದಿನ ದಿನ ಈ ಪ್ರಶ್ನೆ ಎತ್ತುವವರೂ ಇರಲಾರರು. ರಾಮಚಂದ್ರಾಪುರ ಮಠ ಶುದ್ಧ ದೇಸಿ ತಳಿಯ ಗೋವು ಉಳಿಸಲು ಬಹುದೊಡ್ಡ ಆಂದೋಲನ ನಡೆಸಿದೆ. ಭಾರತೀಯ ತಳಿಗಳ ಪರಿಶುದ್ಧತೆ ಉಳಿಯಬೇಕು ಎಂಬ ಕಾರಣಕ್ಕೆ ತಳಿಸಂಕರ ವಿರೋಧಿಸುತ್ತಾ ಬಂದಿದೆ. ಗೋವಿನಲ್ಲಿ ತಳಿಸಂಕರ ಹೇಗೆ ಪ್ರಮಾದವೋ ಭಾಷೆಯಲ್ಲಿ ಕೂಡಾ ಸಂಕರ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟರು.

ನಮ್ಮ ಮಾತೃಭಾಷೆಯ ಹಲವು ಪದಗಳು ಮರೆತು ಹೋಗಿವೆ. ಕನ್ನಡ ಮಾತನಾಡುವ ಪ್ರಯತ್ನ ಇಂದಿನಿAದಲೇ ಆರಂಭವಾಗಲಿ; ಕನ್ನಡ ಮಾತನಾಡಬೇಕಾದಲ್ಲಿ ಕನ್ನಡವನ್ನೇ ಮಾತನಾಡೋಣ. ಪರಿಸ್ಥಿತಿಗೆ ಅನುಗುಣವಾಗಿ ಆಂಗ್ಲಭಾಷೆ ಮಾನಾಡಿದರೆ ತಪ್ಪಲ್ಲ; ಆದರೆ ಕನ್ನಡದ ಜತೆ ಅದನ್ನು ಬೆರೆಸುವುದು ಬೇಡ. ಹಾಗೆ ಮಾಡಿದರೆ ಇಡೀ ಸಮಾಜವೇ ಭಾಷೆ ಇಲ್ಲದ ಸಮಾಜವಾಗಿ ಮಾರ್ಪಾಡಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಈ ಸಮಾಜವನ್ನು ಬದಲಾಯಿಸುವ ಕಾರ್ಯ ಇಂದಿನಿAದಲೇ ಆರಂಭವಾಗಲಿ. ಮನೆಗಳಲ್ಲಿ ಕನ್ನಡ ಅಭ್ಯಸಿಸೋಣ. ಮರೆತು ಹೋದ ಹಳೆ ಪದಗಳ ಮರು ಅನ್ವೇಷಣೆ ನಡೆಯಲಿದೆ; ಮತ್ತೆ ಕೆಲ ಪದಗಳನ್ನು ಸೃಷ್ಟಿ ಮಾಡುವ ಪ್ರಮೇಯವೂ ಬರುತ್ತದೆ. ಅದನ್ನೂ ಮಾಡೋಣ ಎಂದು ಸಲಹೆ ಮಾಡಿದರು.

ಮೊದಲ ಹಂತದಲ್ಲಿ ಪರಕೀಯ ಶಬ್ದಗಳನ್ನು ಕಡಿಮೆ ಮಾಡೋಣ; ಅಂತಿಮವಾಗಿ ಶುದ್ಧವಾದ ಭಾಷೆಯನ್ನು ಉಳಿಸಿ ಬೆಳೆಸೋಣ. ಚಾತುರ್ಮಾಸ್ಯದಲ್ಲಿ ನಾಲಿಗೆ ಶುದ್ಧೀಕರಣದ ಕಾರ್ಯ ಮಾಡೋಣ. ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಆಶಿಸಿದರು.
ಈ ವೇಳೆ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಜಿ.ಎಲ್.ಗಣೇಶ್, ಚಾತುರ್ಮಾಸ್ಯ ಸಮಿತಿ ಸಂಚಾಲಕ ಮಂಜುನಾಥ ಸುವರ್ಣಗದ್ದೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ ಹೆಗಡೆ, ಮಹಾಮಂಡಲ ಉಪಾಧ್ಯಕ್ಷ ಜಿ.ಜಿ.ಹೆಗಡೆ ತಲೆಕೇರಿ, ಯು .ಎಸ್.ಜಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

Discussion about this post

Previous Post

ಹವ್ಯಕ ಕ್ಷೇಮಾಭಿವೃದ್ದಿ ಸಂಘದ ಮಾದರಿ ಕಾರ್ಯ

Next Post

ಒಂದೇ ಕಂಪನಿ.. ಒಂದೇ ಹುದ್ದೆ.. 50 ವರ್ಷ ದುಡಿದರೂ ಈತ ನಿವೃತ್ತಿಯಾಗಿಲ್ಲ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋