ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಜುಲೈ 25ರ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೊಯಿಡಾದ ಶಾಲೆಗಳಿಗೆ ಮಾತ್ರ ಈ ರಜೆ ಸಿಗಲಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೂ ರಜೆ ಅನ್ವಯ.
ಉಳಿದ ತಾಲೂಕುಗಳಲ್ಲಿ ಮಳೆ ಕಡಿಮೆ ಇರುವ ಕಾರಣ ಅಲ್ಲಿ ರಜೆ ಘೋಷಣೆ ಆಗಿಲ್ಲ.