ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಅಗಸ್ಟ 3ರ ಶನಿವಾರ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಕಾರಣದಿಂದ ಮಕ್ಕಳಿಗೆ ಶಾಲೆಗೆ ತೆರಳಲು ಅಸಾಧ್ಯ ಎಂದು ಶಿಕ್ಷಣಾಧಿಕಾರಿಗಳು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ, ದಾಂಡೇಲಿ ಜೊತೆ ಶಿರಸಿ-ಸಿದ್ದಾಪುರ ತಾಲೂಕಿನ ಶಾಲೆಗಳಿಗೂ ರಜೆ ನೀಡಲಾಗಿದೆ. ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಜೊತೆ ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ `ಆರೆಂಜ್ ಅಲರ್ಟ\’ ಮುಂದುವರೆಯಲಿದೆ.
ಯಲ್ಲಾಪುರ, ಮುಂಡಗೋಡು, ಹಳಿಯಾಳ ತಾಲೂಕಿನ ಶಾಲೆಗಳಿಗೆ ಶನಿವಾರ ರಜೆ ಇಲ್ಲ.