ಕುಮಟಾ: ಪದೇ ಪದೇ ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ದೂರಿ ನಾಡುಮಾಸ್ಕೇರಿಯ ಜನ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
`ಈ ಭಾಗದ ಹಳೆಯ ವಿದ್ಯುತ್ ತಂತಿ ಹಾಗೂ ಕಂಬದಿoದ ಸಾಕಷ್ಟು ಸಮಸ್ಯೆಯಾಗಿದೆ. ಈ ಬಗ್ಗೆ ದೂರು ನೀಡಿದರೂ ಅಧಿಕಾರಿಗಳು ಕ್ರಮ ಜರುಗಿಸಿಲ್ಲ\’ ಎಂದು ನಾಡುಮಾಸ್ಕೇರಿ ಗ್ರಾ ಪಂ ಅಧ್ಯಕ್ಷ ಈಶ್ವರ ಗೌಡ ಆಕ್ರೋಶ ವ್ಯಕ್ತಪಡಿಸಿದರು. `ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಬೇಕು\’ ಎಂದು ಆಗ್ರಹಿಸಿದರು.