ಯಲ್ಲಾಪುರ: ನಾಡಿನ ಒಳಿತಿಗಾಗಿ ಪ್ರಾರ್ಥಿಸಿ ಜೋಡಳ್ಳದ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮಹಿಳೆಯರು ವಿಶೇಷ ಕುಂಕುಮ ಅರ್ಚನೆ ಸೇವೆ ಸಲ್ಲಿಸಿದರು.
ಪ್ರತಿ ವರ್ಷ ಶ್ರಾವಣ ಮಾಸದ ಅವಧಿಯಲ್ಲಿ ಈ ಸೇವೆ ಸಲ್ಲಿಸಲಾಗುತ್ತಿದೆ. ಈ ವೇಳೆ ಶಾಂತಿ-ಸಮೃದ್ಧಿಗಾಗಿ ಪ್ರಾರ್ಥಿಸಲಾಗುತ್ತದೆ. ವೈದಿಕ ರಾಮಚಂದ್ರ ಭಟ್ಟ ಹಿತ್ಲಕಾರಗದ್ದೆ ಈ ಕಾರ್ಯಕ್ರಮ ನಡೆಸಿಕೊಟ್ಟರು.