`ಪ್ರತಿಯೊಬ್ಬರು ಭಗವದ್ಗೀತೆ ಅಧ್ಯಯನ ಮಾಡಿ ಶ್ರೀಕೃಷ್ಣನ ಮಹತ್ವ ಅರಿಯಬೇಕು’ ಎಂದು ಉತ್ತರ ಕನ್ನಡದ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದ್ದಾರೆ.
ಶನಿವಾರ ಕಾರವಾರದ ಶಿವಾಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಕೃಷ್ಣನ ಭಾವಚಿತ್ರಕ್ಕೆ ನಮಿಸಿ ಮಾತನಾಡಿದ್ದು, `ಶ್ರೀಕೃಷ್ಣನ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ’ ಎಂದು ಹೇಳಿದರು. ಭಗವದ್ಗೀತೆಯಲ್ಲಿ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರವಿದೆ. ಶ್ರೀಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸಿರುವ ಸಂದೇಶಗಳು ಎಲ್ಲರಿಗೂ ಅನ್ವಯ’ ಎಂದವರು ಹೇಳಿದರು.
`ಯಾವುದೇ ಫಲಾಪೇಕ್ಷೆ ಇಲ್ಲದೇ ನೀಡಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ. ನಾವೇಲ್ಲರೂ ಅದನ್ನು ಪಾಲಿಸಬೇಕು’ ಎಂದು ಕರೆ ನೀಡಿದರು. ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಶಿವಾಜಿ ಶಿಕ್ಷಣ ಸಂಸ್ಥೆಯ ಪ್ರಮುಖರು ಇದ್ದರು.
Discussion about this post