ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಅಗಸ್ಟ 18ರಂದು ರಜೆ ಘೋಷಿಸಲಾಗಿದೆ.
ಅಗಸ್ಟ 17ರಿಂದ 19ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸುಚನೆ ಹಿನ್ನಲೆ ಮುನ್ನಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ ಹಾಗೂ ದಾಂಡೇಲಿ ತಾಲೂಕಿನ ಶಾಲೆಗಳಿಗೆ ಈ ರಜೆ ಸಿಗಲಿದೆ. ಈ ಬಾರಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳ ಜೊತೆ ಪಿಯು ಕಾಲೇಜುಗಳಿಗೆ ಸಹ ರಜೆ ನೀಡಲಾಗಿದೆ. ಹಳಿಯಾಳ ಹಾಗೂ ಮುಂಡಗೋಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ಈ ರಜೆ ಇಲ್ಲ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಡೀಸಿ ಆದೇಶಿಸಿದ್ದಾರೆ. ರಜೆ ಅವಧಿಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
Discussion about this post