ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದ ಕಾರಣ ರೆಡ್ ಅಲರ್ಟ ಘೋಷಿಸಲಾಗಿದೆ. ಹೀಗಾಗಿ ಅಗಸ್ಟ 19ರಂದು ಜಿಲ್ಲೆಯ 11 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ರಜೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿಗೆ ಈ ರಜೆ ನಿಯಮ ಅನ್ವಯ ಆಗುವುದಿಲ್ಲ. ಅದನ್ನು ಹೊರತುಪಡಿಸಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ಹಾಗೂ ಹಳಿಯಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆಯಾಗಿದೆ.
ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಜೊತೆ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಸಿಕ್ಕಿದೆ. ಮಕ್ಕಳ ಸುರಕ್ಷತೆಗಾಗಿ ಈ ರಜೆ ನೀಡಲಾಗಿದೆ. ಮುಂಡಗೋಡಿನಲ್ಲಿ ಮಳೆ ಪ್ರಮಾಣ ಕಡಿಮೆಯಿರುವ ಕಾರಣ ರಜೆ ಕೊಟ್ಟಿಲ್ಲ.
Discussion about this post