ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಗಾಗಿ ಹೊನ್ನಾವರದ ಶರಾವತಿ ಕಣಿವೆಯಲ್ಲಿ ವಿದ್ಯುತ್ ನಿಗಮ ಪಂಪ್ ಸ್ಟೋರೇಜ್ ಮೂಲಕ 2 ಸಾವಿರ ಮೇಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಉದ್ದೇಶಿಸಿದೆ. ಪರಿಸರ ಹಾನಿ, ಜನರ ಒಕ್ಕಲೆಬ್ಬಿಸುವಿಕೆ, ಅಪರೂಪದ ಸಿಂಗಳಿಕ ರಕ್ಷಣೆ ಕುರಿತು ಜನರಲ್ಲಿ ಗೊಂದಲ ಹುಟ್ಟಿರುವುದರಿಂದ ಮಾಧ್ಯಮದವರ ಪ್ರಶ್ನೆಗೆ ಅಲ್ಲಿನ ಅಧಿಕಾರಿಗಳು ಉತ್ತರಿಸಿದ್ದಾರೆ.
`ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ ಅತಿ ಕಡಿಮೆ ಪರಿಸರ ಹಾನಿಯೊಂದಿಗೆ 2000 ಮೆಗಾವ್ಯಾಟ್ ನಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ. ಈ ಯೋಜನೆ ರಾಜ್ಯದ ವಿದ್ಯುತ್ ಬೇಡಿಕೆ ಪೂರೈಕೆಗೆ ಅನಿವಾರ್ಯವಾಗಿದೆ. ಈ ಯೋಜನ ಜಾರಿಗೆ ಕೇಂದ್ರ ಸರ್ಕಾರದ 13 ಇಲಾಖೆ ಹಾಗೂ ನಿರ್ದೇಶನಾಲಯ ಅನುಮತಿ ನೀಡಿದ್ದು, ಯೋಜನೆ ಬಗ್ಗೆ ಆತಂಕ ಬೇಡ’ ಎಂದು ಅಲ್ಲಿನ ಅಧಿಕಾರಿಗಳು ಸಮಜಾಯಿಶೀ ನೀಡಿದ್ದಾರೆ.
`ಶರಾವತಿ ಪಿಎಸ್ಪಿ ಯೋಜನೆಯಡಿ 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗಲಿದೆ. ಈ ಭಾರೀ ಪ್ರಮಾಣದ ವಿದ್ಯುತ್ ಉತ್ಪಾದನೆಯ ಈ ಯೋಜನೆಯನ್ನು ಕೆಪಿಸಿಎಲ್ ಅತಿ ಕಡಿಮೆ ಪರಿಸರ ಹಾನಿಯೊಂದಿಗೆ ಯೋಜನೆಯನ್ನು ಸಿದ್ಧಪಡಿಸಿದೆ. ಈ ಯೋಜನೆ ಜಾರಿ ವೇಳೆ ಈಗಾಗಲೇ ನಿರ್ಮಾಣವಾಗಿರುವ ಗೇರುಸೊಪ್ಪ ಮತ್ತು ತಲಕಳಲೆ ಅಣೆಕಟ್ಟೆಗಳನ್ನು ಬಳಸಿಕೊಳ್ಳುವ ಪರಿಣಾಮ ಹೊಸ ಅಣೆಕಟ್ಟೆ ನಿರ್ಮಾಣದಂತಹ ಕಾಮಗಾರಿ ಈ ಯೋಜನೆಯಲ್ಲಿ ಇಲ್ಲ. ಇನ್ನು ಭೂಮಿಯ ಆಳದಲ್ಲಿ ಸುರಂಗದ ಮೂಲಕ ನೀರನ್ನು ಹರಿಬಿಡುವ ಮತ್ತು ಅದೇ ಟನಲ್ ಮೂಲಕ ನೀರನ್ನು ಎತ್ತುವಳಿ ಮಾಡುವ ಪರಿಣಾಮ ಸುರಂಗ ನಿರ್ಮಾಣದ ಭೂಮಿಯ ಮೇಲ್ಮನಲ್ಲಿ ಇರುವ ಮರ-ಗಿಡ-ಪರಿಸರಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಪ್ರಸ್ತುತ ಇರುವ ರಸ್ತೆಯನ್ನೇ ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, 3.5 ಮೀಟರ್ ಇರುವ ಈ ರಸ್ತೆಯನ್ನು ಅಗತ್ಯ ವಸ್ತುಗಳ ರವಾನೆಗೆ ಅನುವಾಗುವಂತೆ 5.5 ಮೀಟರ್ ವಿಸ್ತರಿಸಲು ಯೋಜಿಸಲಾಗಿದೆ’ ಎಂದವರು ಮಾಹಿತಿ ನೀಡಿದ್ದಾರೆ.
`ಭೂಮಿಯ ಒಳಗೆ ಪಂಪ್ ಹೌಸ್ ಸೇರಲು ಸುರಂಗ ಪ್ರವೇಶಿಸುವ ಸ್ಥಳದಲ್ಲಿ ಮಾತ್ರ ಅಲ್ಪ ಪ್ರಮಾಣದ ಅರಣ್ಯ ಪ್ರದೇಶ ಬಳಕೆ ಮಾಡಿಕೊಳ್ಳಲಾಗುವುದು. ಯೋಜನೆ ಪೂರ್ಣಗೊಂಡ ನಂತರ ಸುರಂಗದ ಪ್ರವೇಶ ದ್ವಾರದ ಸುತ್ತಮುತ್ತ ಅರಣ್ಯ ಪುನರ್ ನಿರ್ಮಾಣವಾಗಲಿದೆ. ಈ ಸಂಬoಧ ಈಗಾಗಲೇ ರಾಜ್ಯ ಅರಣ್ಯ ಇಲಾಖೆ, ಕೇಂದ್ರ ಅರಣ್ಯ ಇಲಾಖೆ ಹಲವು ಭಾರಿ ಸ್ಥಳ ಪರಿಶೀಲನೆ ನಡೆಸಿ ಕನಿಷ್ಠ ಗಿಡ-ಮರಗಳ ಕಡಿತದೊಂದಿಗೆ ಯೋಜನೆ ಜಾರಿ ಮಾಡಲು ಕ್ರಮವಹಿಸಿವೆ’ ಎಂದು ಹೇಳಿದ್ದಾರೆ. `ಶರಾವತಿ ಪಿಎಸ್ಪಿ ಯೋಜನೆ ಜಾರಿ ಪ್ರದೇಶದಲ್ಲಿ ಅಪರೂಪದ ಸಿಂಗಳೀಕಗಳು ಸಂಚರಿಸುತ್ತವೆ ಎಂದು ಅರಣ್ಯ ಇಲಾಖೆಯು ತಿಳಿಸಿದೆ. ಇವರುಗಳ ಸಂಚಾರಕ್ಕೆ ಸಹ ತೊಡಕಾಗದಂತೆ ಕ್ರಮ ವಹಿಸಲು ಕೆಪಿಸಿ ಮುಂದಾಗಿದೆ. ಯೋಜನೆ ಜಾರಿ ವೇಳೆ ಅರಣ್ಯ ಇಲಾಖೆ ನೇತೃತ್ವದಲ್ಲಿ ಸಿಂಗಳೀಕಗಳ ಸಂಚಾರಕ್ಕೆ ಯಾವುದೇ ಬಾದಕ ಆಗದಂತೆ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಅನುಸರಿಸಲಾಗಿದ್ದ ಮೇಲೇತುವೆ (ಟ್ರೇ ಕ್ಯಾನೋಪಿ) ಗಳನ್ನು ಅರಣ್ಯ ಇಲಾಖೆ, ಸೂಚನೆ, ಮಾರ್ಗದರ್ಶನ ಮತ್ತು ಮೇಲುಸ್ತುವಾರಿಯಲ್ಲಿ ನಿರ್ಮಾಣ ಮಾಡುವ ಷರತ್ತಿನೊಂದಿಗೆ ಕೆಪಿಸಿ ಯೋಜನೆ ಜಾರಿಗೆ ಮುಂದಾಗಿದೆ’ ಎಂಬ ಮಾಹಿತಿ ನೀಡಿದ್ದಾರೆ.
`ಶರಾವತಿ ಪಿಎಸ್ಪಿ- ಪಂಪ್ಡ್ ಸ್ಟೋರೇಜ್ ಯೋಜನೆ ಆಗಿರುವ ಪರಿಣಾಮ ಅತಿ ಕಡಿಮೆ ಮತ್ತು ನೀರಿನ ದೀರ್ಘಾವಧಿ ಬಳಕೆಯೇ ಈ ಯೋಜನೆಯ ವಿಶೇಷವಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ವಾರ್ಷಿಕ ಸರಾಸರಿ 140ರಿಂದ 220 ಟಿಎಂಸಿ ನೀರು ಸಂಗ್ರಹವಾಗುತ್ತದೆ. ಈ ನೀರನ್ನು ಬಳಕೆ ಮಾಡಿಕೊಂಡು ಈಗಾಗಲೇ ಜಲ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಈ ನೀರಿನ ಬಳಕೆಯಿಂದ ಜಲ ವಿದ್ಯುತ್ ಉತ್ಪಾದನೆ ನಂತರ ಕೃಷಿ, ಕುಡಿಯಲು, ಮೀನುಗಾರಿಗೆ ಸೇರಿದಂತೆ ವಿವಿಧ ರೀತಿಯಲ್ಲಿ ಸಾರ್ವಜನಿಕರು ಮತ್ತು ರೈತರು ಬಳಕೆ ಮಾಡಿಕೊಂಡ ನಂತರ ಆ ನೀರು ಸಮುದ್ರ ಸೇರುತ್ತಿದೆ. ಶರಾವತಿ ಪಿಎಸ್ಸಿ ಜಾರಿ ನಂತರವೂ ಈಗಿನ ಶರಾವತಿ ನೀರಿನ ಬಳಕೆದಾರರಿಗೆ ಯಾವುದೇ ರೀತಿಯಲ್ಲಿ ನೀರಿನ ಪ್ರಮಾಣದಲ್ಲಿ ಕೊರತೆ ಆಗುವುದಿಲ್ಲ’ ಎಂದವರು ಸ್ಪಷ್ಠನೆ ನೀಡಿದ್ದಾರೆ. `ಶರಾವತಿ ಪಿಎಸ್ಪಿ ಯೋಜನೆಯಡಿ ನೀರಿನ್ನು ಮರುಬಳಕೆ ಮಾಡುವುದರಿಂದ ಮತ್ತು ಮುಂದಿನ 50-60 ವರ್ಷಗಳ ಅವಧಿಗೆ ಒಮ್ಮೆ ಮಾತ್ರ ಕೇವಲ 0.37 ಟಿಎಂಸಿ ನೀರನ್ನು ಬಳಕೆ ಮಾಡಲಾಗುವುದು. ಇದಕ್ಕಿಂತ ಹೆಚ್ಚಿನ ನೀರನ್ನು ಬಳಕೆ ಮಾಡಲು ಅಥವಾ ಅಣೆಕಟ್ಟೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ನೀರನ್ನು ಸಂಗ್ರಹಿಸಲು ಅವಕಾಶವೇ ಇಲ್ಲದಿರುವುದರಿಂದ ಎಲ್ಲೆಡೆ ಈಗಿನಂತೆಯೇ ನೀರು ಹರಿಯಲಿದೆ ಮತ್ತು ಸಮುದ್ರಕ್ಕೂ ನೀರು ಸೇರಲಿದೆ. ಹೀಗಾಗಿ ಶರಾವತಿ ಪಂವ್ಕ್ ಸ್ಟೋರೇಜ್ ಯೋಜನೆಯಿಂದ ನೀರಿನ ಕೊರತೆ ಅಥವಾ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಿಲ್ಲ’ ಎಂದು ಹೇಳಿದ್ದಾರೆ.
ಶರಾವತಿ ಪಿಎಸ್ಪಿ ಯೋಜನೆ ಜಾರಿಯಿಂದ ಗುಡ್ಡ ಕುಸಿತ ಭೀತಿ ಬಗ್ಗೆ ಸಾರ್ವಜನಿಕರು ಆತಂಕಗೊAಡಿರುವ ಬಗ್ಗೆಯೂ ಕೆಪಿಸಿ ಸ್ಪಷ್ಟನೆ ನೀಡಿದ್ದು `ಶರಾವತಿ ಪಿಎಸ್ಪಿ ಯೋಜನೆ ಜಾರಿಗೂ ಮುನ್ನ ಪ್ರಾಥಮಿಕ ಹಂತದಲ್ಲಿ ಕೇಂದ್ರ ಸರ್ಕಾರದ ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯೂ ಈ ಪ್ರದೇಶದಲ್ಲಿ ಸರ್ವೆ ಕಾರ್ಯ ನಡೆಸಿದೆ. ಪಿಎಸ್ಪಿ ಜಾರಿ ಪ್ರದೇಶದಲ್ಲಿ ಸುರಂಗ ನಿರ್ಮಾಣ ಅಥವಾ ಕಾಮಗಾರಿಯಿಂದ ಭೂ ಕುಸಿತ ಸಾಧ್ಯತೆ ಆಗುವುದಿಲ್ಲ ಎಂಬುದನ್ನು ದೃಢೀಕರಿಸಿದ ನಂತರವೇ ಯೋಜನೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಇಲ್ಲಿ ಗುಡ್ಡ ಕುಸಿತ ಸಾಧ್ಯತೆಗಳೂ ಇಲ್ಲ’ ಎಂದು ಜನರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ.
ಸಾರ್ವಜನಿಕರಿಗೆ ಪರಾಮರ್ಶಿಸಲು ಅವಕಾಶ
`ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸರ್ಕಾರದ ಯೋಜನೆ ಆಗಿದೆ ಮತ್ತು ಈ ಯೋಜನೆ ಜಾರಿ ಏನು? ಎತ್ತ? ಎಂಬ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಸಲುವಾಗಿ ಯೋಜನೆ ಜಾರಿ ವ್ಯಾಪ್ತಿಯ ಜಿಲ್ಲೆಗಳ ಸಂಬoಧಿತ ಜಿಲ್ಲಾಧಿಕಾರಿ ಕಚೇರಿ ಹಾಗೂ ಪಂಚಾಯತ ಕಚೇರಿಗಳಲ್ಲಿ ಯೋಜನೆಯ ಖಾಸಗಿ ಮತ್ತು ಭದ್ರತೆ ದೃಷ್ಟಿಯ ವಿವರಗಳ ಹೊರತಾಗಿ ಸಮರ್ಪಕ ವಿವರಗಳ ಪರಿಸರ ಪರಿಣಾಮ ಮೌಲ್ಯಮಾಪನ ವರದಿಗಳನ್ನು ಈ ಕಚೇರಿಗಳಲ್ಲಿ ಇರಿಸಲಾಗಿದೆ. ಇದರ ಪ್ರತಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್‌ನಲ್ಲೂ ಲಭ್ಯವಿದೆ. ಸಾರ್ವಜನಿಕರು ಈ ವಿವರಗಳನ್ನು ಖುದ್ದು ಪರಿಶೀಲಿಸಲು ಅವಕಾಶ ಮಾಡಿಕೊಡಲಾಗಿದೆ’ ಎಂದಿದ್ದಾರೆ. ಈ ಎಲ್ಲಾ ವಿಷಯಗಳ ಬUಶರಾವತಿ ಯೋಜನೆಯ ಚೀಫ್ ಇಂಜಿನೀಯರ್ ರಮೇಶ್, ಮಾದೇಶ್, ಅಶೋಕ್ ನಾಯಕ್ ಗಿರೀಶ್ ಎಸ್ ಎಂ, ಉಮಾಪತಿ ಕೆ ಆರ್ ಇತರರಿದ್ದರು.
ಶರಾವತಿ ಯೋಜನೆಯ ವಿಡಿಯೋ ಮಾಹಿತಿ ಇಲ್ಲಿ ನೋಡಿ..
Discussion about this post