`ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಅರಣ್ಯ ಅತಿಕ್ರಮಣ ನಡೆಸಿದವರಿಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಮಾಡುವ ಹಾಗಿಲ್ಲ. ಹೊಸದಾಗಿ ಅರಣ್ಯ ಅತಿಕ್ರಮಣ ನಡೆಸಲು ಅವಕಾಶ ಕೊಡುವ ಹಾಗಿಲ್ಲ\’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭೆಯಲ್ಲಿ ಮಾತನಾಡಿದ ಅವರು `ಜಿಲ್ಲೆಯಲ್ಲಿ ಯಾರೂ ಹೊಸದಾಗಿ ಅರಣ್ಯ ಅತಿಕ್ರಮಣ ನಡೆಸಬಾರದು. ಅದನ್ನು ತಡೆಯುವ ಹೊಣೆ ಅರಣ್ಯ ಅಧಿಕಾರಿಗಳದ್ದಾಗಿದೆ. ಇದರೊಂದಿಗೆ ಅರಣ್ಯ ಕಾನೂನುಗಳಿಂದ ಸರ್ಕಾರದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತೊಂದರೆ ಆಗದಂತೆಎಯೂ ನೋಡಿಕೊಳ್ಳಬೇಕು\’ ಎಂದು ಸೂಚಿಸಿದರು.
`ರಾಜ್ಯ ಸರ್ಕಾರವು ಕಸ್ತೂರಿ ರಂಗನ್ ವರದಿಯನ್ನು ಈಗಾಗಲೇ ತಿರಸ್ಕರಿಸಿದೆ. ಈ ಸಭೆ ಸಹ ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ಠರಾವು ಮಾಡಲಿದೆ\’ ಎಂದರು. ಈ ಬಗ್ಗೆ ಶಾಸಕ ಭೀಮಣ್ಣ ನಾಯ್ಕ ಮಾತನಾಡಿದ್ದು, ಅವರ ಮನವಿಗೆ ಸಚಿವರು ಸಹಮತ ವ್ಯಕ್ತಪಡಿಸಿದರು. `ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಮತ್ತು ಹಳದಿ ಎಲೆ ರೋಗ ಆವರಿಸಿದೆ. ತೋಟಗಾರಿಕಾ ಇಲಾಖೆಯಿಂದ ಅತ್ಯಂತ ಹೆಚ್ಚು ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳು ಮತ್ತು ಔಷಧ ಸಿಂಪಡಣೆಯನ್ನು ಮಾಡುವಂತೆ ಶಾಸಕ ಭೀಮಣ್ಣ ನಾಯ್ಕ್ ತಿಳಿಸಿದರು. ಈ ರೋಗ ನಿಯಂತ್ರಣ ಕುರಿತಂತೆ ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳ ಮೂಲಕ ಶಿರಸಿಯಲ್ಲಿಯೇ ಸಂಶೋಧನೆ ನಡೆಸಿ ಸೂಕ್ತ ಪರಿಹಾರ ಕಂಡು ಕೊಳ್ಳುವಂತೆ ಮತ್ತು ಕೃಷಿಕರಿಗೆ ರೋಗ ನಿಯಂತ್ರಣ ಕ್ರಮಗಳ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸುವಂತೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಯುವನಿಧಿ ಯೋಜನೆಯಲ್ಲಿ ಪ್ರಸ್ತುತ ಸಾಧಿಸಿರುವ ಪ್ರಗತಿಯ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಜಿಲ್ಲೆಯ ಯಾವುದೇ ಫಲಾನುಭವಿ ಈ ಯೋಜನೆಯಿಂದ ವಂಚಿತರಾಗದoತೆ ಅಧಿಕಾರಿಗಳು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಶಕ್ತಿ ಯೋಜನೆಯಡಿ ಸಂಚರಿಸುವ ಮಹಿಳಾ ಪ್ರಯಾಣಿಕರ ಕುರಿತು ಕೆ.ಎಸ್.ಆರ್.ಟಿ.ಸಿ ನಿರ್ವಾಹಕರು ನಿರ್ಲಕ್ಷö್ಯದಿಂದ ಮಾತನಾಡುವ ಕುರಿತು ದೂರುಗಳು ಬರುತ್ತಿದ್ದು, ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ವಿರುದ್ದ ಮಾತನಾಡುವ ಹಾಗೂ ಪ್ರಯಾಣಿಕರೊಂದಿಗೆ ನಿರ್ಲಕ್ಯದಿಂದ ವರ್ತಿಸುವ ಸಿಬ್ಬಂದಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಸಚಿವರು, ಜಿಲ್ಲೆಯಾದ್ಯಂತ ಶಾಲಾ ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ಕೊರತೆಯಾಗದಂತೆ ಹೆಚ್ಚುವರಿ ಬಸ್ ಗಳನ್ನು ವ್ಯವಸ್ಥೆ ಮಾಡುವ ಮೂಲಕ ಯಾವುದೇ ತೊಂದರೆಯಾಗದAತೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
`ಜಿಲ್ಲೆಯಲ್ಲಿ ಮೀನುಗಾರಿಕಾ ಇಲಾಖೆವತಿಯಿಂದ ಮೀನುಗಾರರ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳನ್ನು ಕ್ರಮಬದ್ದವಾಗಿ ನಿಗದಿತ ಅವಧಿಯೊಳಗೆ ನೀಡುವ ಮೂಲಕ ಯಾವುದೇ ಮೀನುಗಾರಿಗೆ ತೊಂದರೆಯಾಗದAತೆ ಎಚ್ಚರಿಕೆ ವಹಿಸಬೇಕು. ಮೀನುಗಾರರ ಸಂಕಷ್ಟ ಪರಿಹಾರ ಮೊತ್ತವನ್ನು 24 ಗಂಟೆಯೊಳಗೆ ಪಾವತಿಸಬೇಕು\’ ಎಂದರು. ಪಂಚಾಯತ್ ರಾಜ್ ಇಂಜನಿಯರಿAಗ್ ಮತ್ತು ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಮೂಲಕ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದ ಸಚಿವರು, ಪಿಎಂಜಿಎಸ್ವೈ ಇಲಾಖೆವತಿಯಿಂದ ಗ್ರಾಮೀಣ ರಸ್ತೆಗಳಲ್ಲಿ÷ ಮಳೆಯಿಂದ ಉಂಟಾಗಿರುವ ರಸ್ತೆಗುಂಡಿಗಳನ್ನು ಒಂದು ತಿಂಗಳ ಒಳಗೆ ಮಚ್ಚುವುದರ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಬ್ಯಾಂಕುಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅವರ ಸಾಲದ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದ ಜನತೆಯ ಆರ್ಥಿಕ ಅಭಿವೃದ್ಧಿಗಾಗಿ ರೂಪಿಸಿರುವ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಅರ್ಜಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಂಜೂರು ಮಾಡುವಂತೆ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಕೈಗಾ ವತಿಯಿಂದ ಸಿ.ಎಸ್.ಆರ್ ನಿಧಿಯಲ್ಲಿ, ಜಿಲ್ಲೆಯಲ್ಲಿನ ಶಾಲೆ ಮತ್ತು ಅಂಗನವಾಡಿಗಳಿಗೆ ಹೆಚ್ಚಿನ ನೆರವು ನೀಡುವ ಮೂಲಕ ಶೈಕ್ಷಣಿಕ ಅಭಿವೃಧ್ದಿಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್. ಅರ್. ಪಾಟೀಲ್, ವಿಧಾನ ಪರಿಷತ್ ಶಾಸಕ ಶಾಂತರಾಮ ಬುಡ್ನಾ ಸಿದ್ದಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹಾಗು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.