ಕಾರವಾರ:
ಜಿಲ್ಲೆಯಲ್ಲಿ ಪ್ರವಾಸಿ ಚಟುವಟಿಕೆಗಳು ಹೆಚ್ಚಾಗಿದ್ದು, ಅಧಿಕ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಜಿಲ್ಲೆಯ ಬೀಚ್ಗಳಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬೀಚ್ನಲ್ಲಿ ಯಾವುದೇ ಜೀವಹಾನಿ ಸಂಭವಿಸದAತೆ ಎಲ್ಲಾ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಗೋಕರ್ಣ ಮತ್ತು ಮುರುಡೇಶ್ವರ ಕಡಲ ತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹೀಗಾಗಿ ಅಪಾಯಗಳ ಕುರಿತು ಸೂಚನಾ ಫಲಕಗಳನ್ನು ಬೀಚ್ನ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕು. ಪ್ರವಾಸಿಗರಿಗೆ ಅಪಾಯದ ಬಗ್ಗೆ ಸೈರನ್ ಮತ್ತು ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾಚ್ಟವರ್ಗಳ ಮೂಲಕ ಪ್ರವಾಸಿಗರು ಸಮುದ್ರದಲ್ಲಿನ ಅಪಾಯದ ಸ್ಥಳಗಳಿಗೆ ತೆರಳದಂತೆ ನಿರಂತರ ಗಮನಹರಿಸಬೇಕು. ಬೀಚ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೀವ ರಕ್ಷಕರನ್ನು ನೇಮಿಸುವಂತೆ ಮತ್ತು ಸಾಕಷ್ಟು ಸಂಖ್ಯೆಯ ಹೋಂ ಗಾರ್ಡ್ಗಳನ್ನು ನಿಯೋಜಿಸುವಂತೆ ಸೂಚಿಸಿದರು.
ಎಲ್ಲಾ ಬೀಚ್ಗಳಲ್ಲಿ ವಾಹನಗಳ ನಿಲುಗಡೆಗೆ ಸಮಸ್ಯೆಯಾಗದಂತೆ ಹಾಗೂ ಪ್ರವಾಸಿಗರು ಬೋಟ್ಗಳಲ್ಲಿ ತೆರಳುವಾಗ ಕಡ್ಡಾಯವಾಗಿ ಜೀವ ರಕ್ಷಕ ಜಾಕೆಟ್ಗಳನ್ನು ಧರಿಸುವಂತೆ ನೋಡಿಕೊಳ್ಳಬೇಕು. ಜೀವ ರಕ್ಷಕರಿಗೆ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಎಲ್ಲಾ ಸುರಕ್ಷತಾ ಪರಿಕರಗಳನ್ನು ಪೂರೈಸಬೇಕು ಎಂದರು.
ಮುರುಡೇಶ್ವರ ಬೀಚ್ನಲ್ಲಿ ಅಪಾಯವಲ್ಲದ ಸಮುದ್ರ ಪ್ರದೇಶದ ಕುರಿತು ಗುರುತು ಮಾಡಿಸುವಂತೆ ಹಾಗೂ ತುರ್ತು ಸಂದರ್ಭದಲ್ಲಿ ಪ್ರವಾಸಿಗರ ರಕ್ಷಣೆಗೆ ಜೆಟ್ ಸ್ಕೀ, ಪ್ರಥಮ ಚಿಕಿತ್ಸಾ ಕಿಟ್ಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪ್ರವಾಸಿಗರ ಗರಿಷ್ಠ ಸುರಕ್ಷತೆಗೆ ಜಿಲ್ಲಾಡಳಿತದ ಮೂಲಕ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿಯು ಪ್ರವಾಸೋದ್ಯಮ, ಪೊಲೀಸ್, ಕಂದಾಯ ಮತ್ತು ಸಂಬAಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳದ್ದಾಗಿದೆ. ಯಾವುದೇ ಲೋಪಗಳಾದಲ್ಲಿ ಸಂಬAಧಪಟ್ಟ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದರು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಜೂಫಿಶಾನ್ ಹಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮಂಗಳಗೌರಿ ಭಟ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
