ದಾಂಡೇಲಿ :
ನಗರದ ರೋಟರಿ ಕ್ಲಬ್ ಆಶ್ರಯದಡಿ ರೋಟರಿ ಶಾಲೆಯ ಸಭಾ ಭವನದಲ್ಲಿ ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಕಾಗದ ಕಾರ್ಖಾನೆಯ ಆಸ್ಪತ್ರೆಯ ವೈದ್ಯೆ ಡಾ.ಪ್ರಿಯಾಂಕಾ ಮೀಸಾಲೆ ಅವರು ಮುಟ್ಟಿನ ನೈರ್ಮಲ್ಯ, ಆರೋಗ್ಯ ನಿರ್ವಹಣೆ ಮತ್ತು ಮುಟ್ಟಿನ ಸುತ್ತಲಿನ ಪುರಾಣಗಳು ಮತ್ತು ತಪ್ಪು ಕಲ್ಪನೆಗಳನ್ನು ಮುರಿಯುವ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಿದರು. ಪ್ರತಿಯೊಬ್ಬರೂ ಸ್ವಚ್ಛತೆಗೆ ವಿಶೇಷ ಆದ್ಯತೆಯನ್ನು ನೀಡಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು.
ರೋಟರಿ ಕ್ಲಬ್ಬಿನ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ಅವರು ಮಾತನಾಡಿ ನಾವು ಸದೃಢ ಆರೋಗ್ಯವನ್ನು ಹೊಂದಿದ್ದರೆ ಮಾತ್ರ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ವರ್ಧನೆಗೆ ಪ್ರಧಾನ ಆದ್ಯತೆಯನ್ನು ನೀಡಬೇಕೆಂದು ಕರೆ ನೀಡಿದರು. ರೋಟರಿ ಕ್ಲಬ್ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಮತ್ತು ಆರೋಗ್ಯ ವರ್ದನೆಗೆ ಹಾಗೂ ಮಹಿಳೆಯರ ಸ್ವಾವಲಂಬನೆಗೆ ಉಪಯುಕ್ತ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಮಿಥುನ್ ನಾಯಕ, ರೋಟರಿ ಕ್ಲಬ್ ಖಜಾಂಚಿ ಲಿಯೋ ಪಿಂಟೋ, ರೋಟರಿ ಕ್ಲಬ್ ಪ್ರಮುಖರಾದ ರಾಹುಲ್ ಬಾವಾಜಿ, ಎಸ್. ಜಿ. ಬಿರಾದಾರ, ಅಭಿಷೇಕ್ ಕನ್ಯಾಡಿ, ಆರ್. ಪಿ. ನಾಯ್ಕ, ರೋಟರಿ ಪ್ರೌಢಶಾಲೆಯ ಮುಖ್ಯೋಪಾಧ್ಯಯಿನಿ ಕಲ್ಪನಾ ನಾಯ್ಕ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಈ ಮಾಹಿತಿಯುಕ್ತ ಮತ್ತು ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮದಲ್ಲಿ ಒಟ್ಟು 150 ವಿದ್ಯಾರ್ಥಿಗಳು ಭಾಗವಹಿಸಿದ್ದರು.
