ಬೇಲೆಕೇರಿ ಅದಿರು ಪ್ರಕರಣದಲ್ಲಿ ಶಾಸಕ‌ ಸೈಲ್ ಗೆ ರಿಲೀಫ್. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟ ಹೈಕೋರ್ಟ್


ಬೆಂಗಳೂರು :
ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ ನೀಡಿದೆ.

ನ್ಯಾಯಮುರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ.

ಆರು ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತು ಮಾಡಿದೆ. ಹೀಗಾಗಿ ಗುರುವಾರ ಎಲ್ಲಾ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಿಕ್ಷೆ ರದ್ದು ಪಡಿಸುವಂತೆ ಶಾಸಕ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿ ಹೈಕೋರ್ಟ್ ಸಿಬಿಐಗೆ ನೋಟಿಸ್‌ ಕೂಡ ಜಾರಿ ಮಾಡಿತ್ತು. ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈ. ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಅಂತಿಮವಾಗಿ ಪ್ರಕರಣಕ್ಕೆ ಸಂಬಂಧಿಸಿದ ಇತರ ಎರಡು ಪ್ರಕರಣಗಳಲ್ಲಿ ತೀರ್ಪು ನೀಡಿದೆ. ಹೀಗಾಗಿ ಪ್ರಮಾಣದಲ್ಲಿ ಶಾಸಕ ಸತೀಶ್ ಸೈಲ್‌ ಅವರಿಗೆ ಸದ್ಯ ರಿಲೀಪ್ ಸಿಕ್ಕಿದಂತಾಗಿದೆ.

  • Sanjay Patil

    Related Posts

    ಕಮಲಾಪುರ: ದತ್ತನ ದರ್ಶನಕ್ಕೆ ತೆರಳುತ್ತಿದ್ದವರ ದುರ್ಮರಣ

    ಕಮಲಾಪುರ: ಬೆಳಕು ಹರಿಯುವುದರ ಒಳಗೆ ದೇವರ ಸನ್ನಿಧಿ ತಲುಪಿ ದರ್ಶನ ಪಡೆಯಬೇಕಿದ್ದವರು ಜವರಾಯನ ಅಟ್ಟಹಾಸದಿಂದ ಸೀದಾ ದೇವರ ಪಾದ ಸೇರಿದ್ದಾರೆ. ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತ ಮಹಾರಾಜರ ದೇವಸ್ಥಾನಕ್ಕೆ ತೆಲಂಗಾಣದಿಂದ ತೆರಳುತ್ತಿದ್ದ ನಾಲ್ವರು ಶನಿವಾರ ನಸುಕಿನ ಜಾವ ನಡೆದ ಅಪಘಾತದಲ್ಲಿ…

    Leave a Reply

    Your email address will not be published. Required fields are marked *

    You Missed

    ಜೋಯಿಡಾ ಗಾವಡೆವಾಡಾದ ಖಾಪ್ರಿ ಜಾತ್ರೆ ಯಶಸ್ವಿ ಸಂಪನ್ನ.

    ಜೋಯಿಡಾ ಗಾವಡೆವಾಡಾದ ಖಾಪ್ರಿ ಜಾತ್ರೆ ಯಶಸ್ವಿ ಸಂಪನ್ನ.

    ವರ್ಗಾವಣೆಗೊಂಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಅವರಿಗೆ ಅದ್ದೂರಿ ಬೀಳ್ಕೊಡುಗೆ.

    ವರ್ಗಾವಣೆಗೊಂಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಅವರಿಗೆ ಅದ್ದೂರಿ ಬೀಳ್ಕೊಡುಗೆ.

    ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು.

    ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು.

    ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ.

    ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ.

    ಜಿಂಕೆಯ ಬೇಟೆ, ಓರ್ವನ ಬಂಧನ.

    ಜಿಂಕೆಯ ಬೇಟೆ, ಓರ್ವನ ಬಂಧನ.

    ಸಿಡಿಲು ಬಡಿದು ನಾಲ್ವರು ಗಂಭೀರ

    ಸಿಡಿಲು ಬಡಿದು ನಾಲ್ವರು ಗಂಭೀರ

    You cannot copy content of this page