
ಬೆಳಗಾವಿ:
ಕದಂಬ ಕನ್ನಡ ಜಿಲ್ಲೆ ಮತ್ತು ಬನವಾಸಿ ತಾಲೂಕು ರಚನೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಮುಂದೆ ಸೋಮವಾರ ಪ್ರಥಿಭಟನೆ ನಡೆಯಿತು.
ವಿಧಾನಸಭೆ ಅಧಿವೇಶನದ ಸಮಯದಲ್ಲಿ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನೂರಾರು ಜನರು ಬೆಳಗಾವಿಯಲ್ಲಿ ಕದಂಬ ಕನ್ನಡ ಜಿಲ್ಲೆಗಾಗಿ ಆಗ್ರಹಿಸಿ ಇದೀಗ ಪ್ರತಿಭಟನೆ ನಡೆಸಿದರು. ಸದ್ಯ ಪ್ರತಿಭಟನೆಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಶಿರಸಿ, ಸಿದ್ದಾಪುರ, ಮುಂಡಗೋಡು, ಬನವಾಸಿ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಸೇರಿದಂತೆ ಎಲ್ಲ ತಾಲೂಕೂಗಳಿಂದ ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.