
ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ರಕ್ಷಣಾ ಸಚಿವಾಲಯದ ತಂತ್ರಜ್ಞಾನ ವಿಭಾಗ ನಿರ್ದೇಶಕ ಅಭಯ ಶಂಕರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ವೇ ಮಹಾಬಲ ಉಪಾಧ್ಯ ಪೂಜೆ ನೆರವೇರಿಸಿ, ಪ್ರಸಾದ ವಿತರಿಸಿದರು. ಮಂದಿರದ ವ್ಯವಸ್ಥಾಪಕ ಸುಬ್ರಹ್ಮಣ್ಯ ಹೆಗಡೆ, ಕಂದಾಯ ನಿರೀಕ್ಷಕ ಸಂತೋಷ ಶೇಟ್ ಇದ್ದರು. ಇದಕ್ಕೂ ಮೊದಲು ಮಹಾ ಗಣಪತಿ ಮಂದರ್ಕೆ ತೆರಳಿ ಪೂಜೆ ಸಲ್ಲಿಸಿದರು.