
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆ ಅಡಿ ಜಿಲ್ಲಾ ಸಂಯೋಜಕರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಹುಡುಕಾಟ ನಡೆದಿದೆ.
ಕರಾರು ಒಪ್ಪಂದದ ಅಡಿ ಈ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. 18ರಿಂದ 45 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಇನ್ನಷ್ಟು ಮಾಹಿತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಲಭ್ಯ.