
ಕಾರವಾರ: `ಉದ್ಯೋಗ ವಿಷಯದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಕೊಡಬೇಕು\’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ) ಆಗ್ರಹಿಸಿದೆ.
ಈ ಕುರಿತು ಮುಖ್ಯಮಂತ್ರಿ ಕಚೇರಿಗೆ ಮನವಿ ಸಲ್ಲಿಸಿರುವ ವೇದಿಕೆ ಪದಾಧಿಕಾರಿಗಳು `ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ವಿಷಯವಾಗಿ ಕಾಯ್ದೆ ರೂಪಿಸಬೇಕು. ಬೇರೆ ಬೇರೆ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಕ್ಕೆ ಬರುತ್ತಿರುವರ ಮೇಲೆ ನಿಗಾ ಇಡಬೇಕು\’ ಎಂದು ಆಗ್ರಹಿಸಿದ್ದಾರೆ. `ವಲಸಿಗರ ದಬ್ಬಾಳಿಕೆಯಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರೇ ಇಲ್ಲ ಎಂಬoತಾಗಿದೆ. ಹೀಗಾಗಿ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿಯೂ ಕನ್ನಡಿಗರಿಗೆ ಸಮಾನ ಅವಕಾಶ ನೀಡಬೇಕು\’ ಎಂದು ಆಗ್ರಹಿಸಿದರು. `ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಉದ್ಯೋಗ ಸಿಗಬೇಕು. ಸರ್ಕಾರಿ ಹಾಗೂ ಸಾರ್ವಜನಿಕ ವಲಯದಲ್ಲಿ ಶೇ 100ರಷ್ಟು ಕನ್ನಡಿಗರಿಗೆ ಮೀಸಲಾತಿ ದೊರೆಯಬೇಕು\’ ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಗಂಗೂಬಾಯಿ ಅವರ ಮೂಲಕ ಸ್ಥಳೀಯ ಹೋರಾಟಗಾರರು ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದ್ದಾರೆ.