
ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ಶುರು ಮಾಡಲಿದೆ.
ಸ್ವ ಉದ್ಯೋಗ ಮಾಡಲು ಆಸಕ್ತಿ ಇರುವವರು ಜು 31ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 18ರಿಂದ 45 ವರ್ಷದ ಒಳಗಿನವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಹೊಂದಿರಬೇಕು ಎಂಬ ನಿಯಮಗಳಿವೆ. ತರಬೇತಿ ಸಂಪೂರ್ಣ ಉಚಿತವಾಗಿದ್ದು, ಊಟ ಹಾಗೂ ವಸತಿಯನ್ನು ಕೊಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಳಾಸ
ರುಡ್ಸೆಟ್ ಸಂಸ್ಥೆ
ಅರಿಶಿನಕುoಟೆ, ನೆಲಮಂಗಲ ತಾಲ್ಲೂಕು,
ಬೆಂಗಳೂರು ಗ್ರಾಮಾಂತರ ಜಿಲ್ಲೆ
ದೂರವಾಣಿ ಸಂಖ್ಯೆ: 9740982585, 9380162042