ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಹಿನ್ನಲೆ ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆ – ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಶಾಲೆಗೆ ಮಕ್ಕಳು ತೆರಳಲು ಅನಾನುಕೂಲವಾಗುವ ಬಗ್ಗೆ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರರು ವರದಿ ಸಲ್ಲಿಸಿದ್ದರು. ಹವಾಮಾನ ಇಲಾಖೆ ಸಹ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಈ ಹಿನ್ನಲೆ ಜಿಲ್ಲಾಧಿಕಾರಿ ಗಂಗುಬಾಯಿ ಮಾನೆಕರ್ ರಜೆ ಘೋಷಿಸಿದ್ದಾರೆ. ಕಿರಿಯ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಈ ರಜೆ ಅನ್ವಯ.
ರಜೆ ದಿನದ ಪಾಠವನ್ನು ಇನ್ನೊಂದು ದಿನಕ್ಕೆ ಹೊಂದಾಣಿಕೆ ಮಾಡಿಕೊಂಡು ಕಲಿಸುವಂತೆ ಆದೇಶದಲ್ಲಿ ಷರತ್ತು ವಿಧಿಸಲಾಗಿದೆ.