`ಕಾಳಜಿ ಕೇಂದ್ರಕ್ಕೆ ಆಗಮಿಸುವವರಿಗೆ ಊಟ, ವಸತಿ ವೈದ್ಯಕೀಯ ಸೇರಿ ಎಲ್ಲಾ ಬಗೆಯ ಮೂಲಭೂತ ಸೌಕರ್ಯ ಒದಗಿಸಲಾಗುತ್ತದೆ\’ ಎಂದು ನೂತನ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.
ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಅಧಿಕಾರಿಗಳ ಸಭೆ ನಡೆಸಿದ ಅವರು ಸಂತ್ರಸ್ತರ ಮಾಹಿತಿ ಪಡೆದಿದ್ದು, ಜುಲೈ 8 ಮತ್ತು 9ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯ ಪೂರ್ವಬಾವಿಯಾಗಿ ಜಿಲ್ಲೆಯ ಪ್ರಗತಿ ವರದಿಯ ಕುರಿತು ಮಾಹಿತಿ ಪಡೆದರು. ಇದಾದ ನಂತರ ಮಾತನಾಡಿದ ಅವರು `ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕ ಮಂದಿ ತಮ್ಮ ನಿವಾಸಗಳಿಗೆ ತೆರಳಿದ್ದಾರೆ. ಪ್ರಸ್ತುತ 8 ಕಾಳಜಿ ಕೇಂದ್ರಗಳಲ್ಲಿ 26 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ\’ ಎಂದರು. `ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿAದ ಆರೋಗÀ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ\’ ಎಂದರು.