ಉತ್ತರಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಗೆ 2024-25ನೇ ಸಾಲಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಜು.29 ರಂದು ಬೆಳಗ್ಗೆ 6.30 ಗಂಟೆಗೆ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಶಿರಸಿಯಲ್ಲಿ ದೈಹಿಕ ಸಹಿಷ್ಣುತಾ ಪರೀಕ್ಷೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಪ್ರತಿ, ಎಸ್.ಎಸ್.ಎಲ್.ಸಿ. ಮೂಲ ಅಂಕಪಟ್ಟಿ, ಎರಡು ಪೋಟೊ (ಪಾಸ್ ಪೋರ್ಟ ಸೈಜ್), ಆಧಾರ್ ಕಾರ್ಡ, ಜಾತಿ ಹಾಗೂ ಆದಾಯ ಪ್ರಮಾಣಪತ್ರ, ವೈದ್ಯಕೀಯ ಪ್ರಮಾಣ ಪತ್ರ (ಜಿಲ್ಲಾ/ತಾಲೂಕಾ ಆಸ್ಪತ್ರೆಯಿಂದ ಪಡೆದ ವೈದ್ಯಕೀಯ ಪ್ರಮಾಣ ಪತ್ರ) ದಾಖಲೆಗಳೊಂದಿಗೆ ನಿಗದಿತ ಅವಧಿಯಲ್ಲಿ ಹಾಜರಾಗಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ :08382-226589 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.