ಕುಮಟಾದ ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜು 29ರಿಂದ ಆಗಸ್ಟ್ 7ರವರೆಗೆ 10 ದಿನಗಳ ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿಸಹಿತ ಉಚಿತ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ಬುಕ್, ಪಾನ್ಕಾರ್ಡ್ ಝೆರಾಕ್ಸ್ ಪ್ರತಿಯನ್ನು ತರಬೇಕು.
ಮಾಹಿತಿಗೆ:
ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ
ಹೆಗಡೆರಸ್ತೆ, ಕುಮಟಾ -581343
ಮೋ: 9538281989, 9916783825, 9449860007, 8880444612